ಬ್ರೇಕಿಂಗ್ ನ್ಯೂಸ್
04-03-23 10:21 am Mangalore Correspondent ಕ್ರೈಂ
ಉಳ್ಳಾಲ, ಮಾ.4: ಯುವಕನನ್ನ ಮಾತನಾಡುವ ನೆಪದಲ್ಲಿ ಮನೆಯಿಂದ ಹೊರ ಕರೆದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರ ಜತೆಗೂಡಿ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಹೊರ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಗಾಯಾಳುವನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಸದಕತ್ತುಲ್ಲ ಮತ್ತು ಆರೋಪಿಗಳ ನಡುವೆ ವೈಷಮ್ಯವಿತ್ತು. ಕೆಲ ತಿಂಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ಯು.ಟಿ ಖಾದರ್ ಆಸ್ಪತ್ರೆ ಭೇಟಿ
ತಡರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಯು.ಟಿ ಖಾದರ್ ಅವರು ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ವಿವರ ಪಡೆದಿದ್ದಾರೆ. ಅಲ್ಲದೆ ತಕ್ಷಣವೇ ತಪ್ಪಿತಸ್ಥರನ್ನು ಹಿಡಿದು ಶಿಕ್ಷೆಗೊಳಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
A young man was stabbed in front of his home late on Friday night in Kotepura under the Ullal police station limits. The victim, Sadakathullah (34), was immediately rushed to Indiana Hospital, where he remains in critical condition. The suspects, Chabbi alias Kabeer and Razik, are believed to be responsible for the attack and are currently being sought by police.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm