ಬ್ರೇಕಿಂಗ್ ನ್ಯೂಸ್
14-03-23 03:23 pm HK Bengaluru Staffer ಕ್ರೈಂ
ಬೆಂಗಳೂರು, ಮಾ.14: ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಡ್ರಮ್ ಹಾಗೂ ಚೀಲದಲ್ಲಿ ಮಹಿಳೆ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ ಬೈಯ್ಯಪ್ಪನಹಳ್ಳಿ ರೈಲ್ವೆ ಸ್ಟೇಷನ್ ಬಳಿ ಪತ್ತೆಯಾಗಿದೆ.
ಮೊದಲ ಎರಡು ಕೇಸ್ ಗಳ ಬೆನ್ನತ್ತಿರುವ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈಗ ಮತ್ತದೇ ಹಳೇ ಮಾದರಿಯಲ್ಲಿ ಮತ್ತೊಂದು ಮಹಿಳೆಯ ಶವವನ್ನು ಡ್ರಮ್‌ನಲ್ಲಿ ಹಾಕಿಕೊಂಡು ಬಂದು ಬೈಯ್ಯಪ್ಪನಹಳ್ಳಿ ರೈಲ್ವೆ ಸ್ಟೇಷನ್ ಬಳಿ ಇಟ್ಟು ಎಸ್ಕೇಪ್ ಆಗಿದ್ದಾರೆ.
ನಿನ್ನೆ ಸಂಜೆ 7 ಗಂಟೆಗೆ ರೈಲ್ವೆ ನಿಲ್ದಾಣದ ಎಂಟ್ರಿ ಗೇಟ್ ಬಳಿ ಇದ್ದ ಪ್ಲಾಸ್ಟಿಕ್ ಡ್ರಮ್ ವಾಸನೆ ಬರುತ್ತಿತ್ತು. ಇದರಿಂದ ಅನುಮಾನಗೊಂಡ ಆಟೋ ಚಾಲಕರೊಬ್ಬರು ಡ್ರಮ್‌ನ ಮುಚ್ಚುಳ ತೆರೆದು ನೋಡಿದ್ದಾರೆ. ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬಳ ಶವ ಕಂಡಿದೆ. ಶವ ನೋಡಿ ಗಾಬರಿಯಾದ ಆಟೋ ಚಾಲಕ ತಕ್ಷಣವೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿ ಎಫ್‌ಎಸ್‌ಎಲ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಹಿಳೆಯನ್ನು ಬೇರೆ ಕಡೆ ಕೊಲೆ ಮಾಡಿ ಬೆಳಗ್ಗೆ 10 ಗಂಟೆ ಸುಮಾರಿಗೆ ಆಟೋದಲ್ಲಿ ತಂದು ರೈಲ್ವೆ ನಿಲ್ದಾಣದ ಡ್ರಮ್‌ನಲ್ಲಿಟ್ಟು ಹಂತಕರು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಡ್ರಮ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಮಹಿಳೆ 35ವರ್ಷದ ಆಸುಪಾಸಿನವಳೆಂದು ತಿಳಿದುಬಂದಿದೆ. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಸಿಕ್ಕ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆಟೋದಲ್ಲಿ ಬಂದು ಡ್ರಮ್ ಇಟ್ಟು ಎಸ್ಕೇಪ್ ಆಗಿರುವ ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.
ಯಶವಂತಪುರ ಹಾಗೂ ಬೈಯ್ಯಪ್ಪನಹಳ್ಳಿಯಲ್ಲಿ ಇದೇ ಮಾದರಿಯಲ್ಲಿ ಡ್ರಮ್ ಹಾಗೂ ಗೋಣಿ ಚೀಲದಲ್ಲಿ ಮಹಿಳೆಯರ ಶವಗಳ ಪತ್ತೆಯಾಗಿದ್ವು. ಆ ಪ್ರಕರಣಗಳ ತನಿಖೆ ಕೈಗೊಂಡಿರೋ ರೈಲ್ವೇ ಪೊಲೀಸರು, ಹತ್ಯೆಯಾದವರ ಪತ್ತೆ ಮಾಡುವುದಕ್ಕೆ ಹರಸಾಹಸ ಪಡುತ್ತಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಅದೇ ಮಾದರಿಯಲ್ಲಿ ಮಹಿಳೆಯನ್ನ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದಾರೆ. ಇದರ ಸೀರಿಯಲ್ ಕಿಲ್ಲರ್ ಗ್ಯಾಂಗ್ ಕೈವಾಡವಿರುವ ಶಂಕೆ ಶುರುವಾಗಿದೆ. ಸದ್ಯ ಈ ಹಿಂದಿನ ಪ್ರಕರಣಗಳ ಜೊತೆಗೆ ಈಗ ಪತ್ತೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ರೈಲ್ವೆ ಪೊಲೀಸರು ಹಂತಕರ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ.
The body of a woman was found inside a plastic drum at a railway station in Bengaluru on Monday. This is the second incident of a body being found inside a drum at a Bengaluru railway station this year. The drum was found near one of the entry gates of the Baiyappanahalli railway station between 10 am and 11 am on Monday. It had been covered with clothes and lidded.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm