ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm