ಬ್ರೇಕಿಂಗ್ ನ್ಯೂಸ್
23-03-23 12:15 pm HK News Desk ಕ್ರೈಂ
ಚೆನ್ನೈ, ಮಾ.23: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಹಾಗೂ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಾರು ಚಾಲಕ ವೆಂಕಟೇಶನ ಕುಮ್ಮಕ್ಕಿನಿಂದಲೇ ಮನೆಗೆಲಸದವಳಾದ ಈಶ್ವರಿ ಸುಮಾರು 100 ಗ್ರಾಂ ಚಿನ್ನಾಭರಣ, 30 ಗ್ರಾಂ ವಜ್ರಾಭರಣ ಮತ್ತು ನಾಲ್ಕು ಕೆಜಿ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾಳೆ. ಬಳಿಕ ಅವುಗಳನ್ನು ಮಾರಾಟ ಮಾಡಿ, ಅದರಿಂದ ಬಂದ ಹಣವನ್ನು ಮನೆ ಖರೀದಿಗೆ ಬಳಸಿದ್ದಾಳೆ. ಅಲ್ಲದೆ, ಕೆಲವು ವಸ್ತುಗಳನ್ನು ಖರೀದಿಸಲು ಸಹ ಹಣ ಬಳಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ 18 ವರ್ಷಗಳಿಂದ ಸೇವಕಿಯಾಗಿ ಕೆಲಸ ಮಾಡುತ್ತಿದ್ದ ಈಶ್ವರಿ, ಐಶ್ವರ್ಯಾ ರಜನಿಕಾಂತ್ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡಿದ್ದರು ಮತ್ತು ಲಾಕರ್ ಅನ್ನು ಹಲವು ಬಾರಿ ತೆರೆದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಕೀ ಇರುವ ಸ್ಥಳವನ್ನು ಈಶ್ವರಿ ಚೆನ್ನಾಗಿ ತಿಳಿದಿದ್ದಳು. ಆಕೆ ಒಂದೇ ಬಾರಿ ಕಳ್ಳತನ ಮಾಡಿರಲಿಲ್ಲ. ಅನೇಕ ಬಾರಿ ಸ್ವಲ್ಪ ಸ್ವಲ್ಪವಾಗಿ ಆಭರಣಗಳನ್ನು ಕದ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲಸದಾಕೆಯಿಂದ ಕಳುವಾದ ಚರಾಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮನೆ ಆಸ್ತಿ ಖರೀದಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಚೆನ್ನೈನ ಪೋಯಸ್ ಗಾರ್ಡನ್ ಮನೆಯ ಲಾಕರ್‌ನಿಂದ ಬೆಲೆಬಾಳುವ ಚಿನ್ನಾಭರಣಗಳು ನಾಪತ್ತೆಯಾಗಿವೆ ಎಂದು ನಟ ರಜನಿಕಾಂತ್ ಪುತ್ರಿ ಐಶ್ವರ್ಯಾ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ವಾರದ ಹಿಂದೆಯಷ್ಟೇ ಐಶ್ವರ್ಯ ತಮ್ಮ ಮನೆಯಲ್ಲಿ ಕಳ್ಳತನವಾಗಿದೆ ಎಂದು ತೆನಾಂಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ವಸ್ತುಗಳನ್ನು ಖದೀಮರು ದೋಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದೂರು ದಾಖಲಾಗುತ್ತಿದ್ದಂತೆಯೇ ಕಳ್ಳರಿಗಾಗಿ ಪೊಲೀಸ್ ಬಲೆ ಬೀಸಿದ್ದರು.
ಐಶ್ವರ್ಯ ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಮಯವನ್ನು ನೋಡಿಕೊಂಡ ಕಳ್ಳರು ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ದೋಚಿದ್ದಾರೆ. ಫೆಬ್ರವರಿಯಲ್ಲೇ ಈ ಕಳ್ಳತನ ನಡೆದಿದ್ದು, ಇದೀಗ ಸುದ್ದಿ ಬಹಿರಂಗವಾಗಿದೆ. ಐಶ್ವರ್ಯ ಅವರು ಕೊಟ್ಟಿರುವ ದೂರಿನಲ್ಲಿ ಲಾಕರ್ ನಲ್ಲಿ ಇರಿಸಿದ್ದ ಆಭರಣದ ಬಗ್ಗೆ ಮನೆಯ ಕೆಲವು ಕೆಲಸದವರಿಗೆ ಗೊತ್ತಿತ್ತು ಎಂದು ಬರೆಯಲಾಗಿತ್ತು. ಅದರ ಆಧಾರದಲ್ಲಿ ಪೊಲೀಸರು ಕಳ್ಳರ ಹಿಂದೆ ಬಿದ್ದಿದ್ದರು.
ಎಫ್ ಐಆರ್ ಪ್ರಕಾರ ’60 ಪವನ್ ಚಿನ್ನ, ಮೂರು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು, ವ್ರಜದ ಆಭರಣ ಹಾಗೂ ಸಹೋದರಿಯ ಮದುವೆಗೆ ಬಳಸಿದ್ದ ಒಡವೆಗಳನ್ನೂ ಕಳ್ಳರು ದೋಚಿದ್ದಾರೆ. ಫೆಬ್ರವರಿ 10 ರಂದು ಐಶ್ವರ್ಯ ಲಾಕರ್ ತೆರೆದಾಗ ಆಭರಣಗಳು ಮಾಯವಾಗಿದ್ದರ ಬಗ್ಗೆ ಗೊತ್ತಾಗಿದೆ. ಆಘಾತಗೊಂಡ ಅವರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ವಜ್ರದ ಸೆಟ್, ಪುರಾತನ ಕಾಲದ ಚಿನ್ನಾಭರಣ, ಬಳೆಗಳು, ನವರತ್ನ ಸೆಟ್ ಗಳು ಹೀಗೆ ಹಲವು ವರ್ಷಗಳಿಂದ ಸಂಗ್ರಹವಾಗಿದ್ದ ಅಷ್ಟೂ ಆಭರಣಗಳು ಕಳುವು ಆಗಿವೆ ಎಂದು ಹೇಳಲಾಗುತ್ತಿದೆ. ದೂರಿನ ಪ್ರತಿಯಲ್ಲಿ ಹಲವು ವರ್ಷಗಳಿಂದ ಲಾಕರ್ ನೋಡಿರಲಿಲ್ಲ. ಈಗ ನೋಡಿದಾಗ ಆಭರಣವಿಲ್ಲ ಎಂದು ಗೊತ್ತಾಗಿದೆ ಎಂದು ಬರೆಯಲಾಗಿತ್ತು.
Teynampet police in Chennai have arrested the domestic help and driver of Aishwarya Rajinikanth daughter of superstar Rajinikanth for stealing her jewellery.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am