ಬ್ರೇಕಿಂಗ್ ನ್ಯೂಸ್
27-03-23 10:08 pm Mangalore Correspondent ಕ್ರೈಂ
ಮಂಗಳೂರು, ಮಾ.27: ಸುರತ್ಕಲ್ ಬಳಿಯ ಹೊಸಬೆಟ್ಟಿನ ಕುಳಾಯಿ ಎಂಬಲ್ಲಿ ಬಾಡಿಗೆ ಮನೆ ಪಡೆದು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಮೀನಕಳಿಯ ನಿವಾಸಿ ವಿಕ್ರಂ ಅಲಿಯಾಸ್ ಜಯರಾಂ(30), ಕೊಡಿಯಾಲಬೈಲಿನ ಸತೀಶ್(50), ಕುಳಾಯಿ ಹೊನ್ನಕಟ್ಟೆಯ ಸರ್ಫರಾಜ್(37), ಬೈಕಂಪಾಡಿಯ ಅಕ್ಷಯ್ (33) ಬಂಧಿತರು. ಇವರು ಕುಳಾಯಿ ಗ್ರಾಮದ ಬಾಡಿಗೆ ಕೊಠಡಿಯಲ್ಲಿದ್ದುಕೊಂಡು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದರು. ಇವರಿಂದ 790 ಗ್ರಾಮ್ ಗಾಂಜಾ, ನಾಲ್ಕು ಮೊಬೈಲ್ ಫೋನ್, ಒಂದು ಆಟೋ ರಿಕ್ಷಾ, ತೂಕ ಮಾಪನ ವಶಕ್ಕೆ ಪಡೆದಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜು ಬಳಿ ಗಾಂಜಾ ಮಾರಾಟ
ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರಿಸ್ಸಾ ಮೂಲದ ಚಿಂತಾಮಣಿ ಮತ್ತು ದೂಬ ಎಂಬವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 3 ಕೇಜಿ 180 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಸೆರೆ
ಸೋಮವಾರ ಸಂಜೆ 4.30ಕ್ಕೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿ ಮಟ್ಕಾ ಆಟವಾಡುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಅಬುಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ 750 ರೂ. ಹಣ ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಬೋಳಿಯಾರು ಜಂಕ್ಷನ್ ಬಳಿ ಮಟ್ಕಾ ದಂಧೆ ನಡೆಸುತ್ತ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರವೀಣ್ ಎಂಬಾತನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಳಿಯಿಂದ 1650 ರೂ. ಹಣ ವಶಕ್ಕೆ ಪಡೆಯಲಾಗಿದೆ.
Four arrested for sale of Ganja in rented house at Kulai in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm