ಬ್ರೇಕಿಂಗ್ ನ್ಯೂಸ್
29-03-23 09:31 pm Mangalore Correspondent ಕ್ರೈಂ
ಉಳ್ಳಾಲ, ಮಾ.29 : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ತೆರಳುತ್ತಿದ್ದ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು ಅಡ್ಡ ಗಟ್ಟಿ ಯುವತಿಯ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಸುಲಿಗೆ ಮಾಡಿದ್ದಲ್ಲದೆ, ಮೋಟಾರು ಬೈಕನ್ನೂ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ನೊಂದ ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ(33), ಉಳ್ಳಾಲ ,ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್ ಮತ್ತು ಯಮಾಹ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಮಾರ್ಗದರ್ಶನದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಮತ್ತು ಉಪ ನಿರೀಕ್ಷಕರುಗಳಾದ ಕೃಷ್ಣ ಕೆ.ಹೆಚ್ , ಸಂತೋಷ್ ಮತ್ತು ಪಿಸಿಗಳಾದ ಪ್ರವೀಣ ಶೆಟ್ಟಿ, ಅಶೋಕ್, ವಾಸುದೇವ ಸಿಬ್ಬಂದಿಯ ತಂಡ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Three arrested by Ullal police for robbing mobile phones and bike from couple at Uchila in Mangalore. The arrested had threatened the couple and flee the spot by snatching their mobile phones and bike.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm