ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm