ಬ್ರೇಕಿಂಗ್ ನ್ಯೂಸ್
04-04-23 12:05 pm Mangalore Correspondent ಕ್ರೈಂ
ಮಂಗಳೂರು, ಎ.4: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದಾನೆಂಬ ಮಾಹಿತಿ ಆಧರಿಸಿ ಕದ್ರಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಶಿಶಿರ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ಬಾಡಿಗೆಗೆ ವಾಸವಿದ್ದ ಶಿಶಿರ್ ಎಂಬಾತ ಬಂಧಿತ. ಆತನನ್ನು ತನಿಖೆ ನಡೆಸಿದಾಗ ಆ್ಯಂಡ್ರೂ ರೊಡ್ರಿಗಸ್ ಎಂಬಾತ ಈ ಪಿಸ್ತೂಲನ್ನು ತನಗೆ ನೀಡಿದ್ದಾಗಿ ತಿಳಿಸಿದ್ದಾನೆ.
ಆ್ಯಂಡ್ರೂ ರೊಡ್ರಿಗಸ್, 2014ರಲ್ಲಿ ಹಂಪನಕಟ್ಟೆಯಲ್ಲಿ ನಡೆದ ಕುಮಾರ್ ಎಂಬವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿತ್ತು. ಮಂಗಳೂರಿನಲ್ಲಿ ಜೈಲಿನಲ್ಲಿದ್ದ ರೋಡ್ರಿಗಸ್, ಬಳಿಕ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರಿನ ಕೋರ್ಟಿಗೆ ಹಾಜರಾಗಲು ಬಂದಿದ್ದಾಗ ರೋಡ್ರಿಗಸ್ ತನ್ನಲ್ಲಿದ್ದ ಪಿಸ್ತೂಲನ್ನು ಶಿಶಿರ್ ಕೈಗೆ ನೀಡಿದ್ದ.
ಶಿಶಿರ್ ಕೂಡ ಅಪರಾಧ ಹಿನ್ನೆಲೆಯ ವ್ಯಕ್ತಿಯಾಗಿದ್ದು ಬಂದರು, ಕಾವೂರು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಎದುರಿಸುತ್ತಿದ್ದ. ಮೂಲತಃ ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿಯಾಗಿದ್ದ ಶಿಶಿರ್ ತನ್ನ ಅಪರಾಧ ಚಟುವಟಿಕೆ ಕಾರಣದಿಂದ ಮನೆಯವರಿಂದ ದೂರವಾಗಿದ್ದ. ಆನಂತರ, ಮಂಗಳೂರಿಗೆ ಬಂದು ಇಲ್ಲಿ ಒಬ್ಬಂಟಿಯಾಗೇ ನೆಲೆಸಿದ್ದ. ಇದೀಗ ಖಚಿತ ಮಾಹಿತಿ ಆಧರಿಸಿ ಪಿಸ್ತೂಲ್ ಹೊಂದಿದ್ದ ಕಾರಣಕ್ಕೆ ಶಿಶಿರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Old Accused arrested with unlicensed Gun at Kadri by Kadri Police in Mangalore. The arrested has been identified as Shishir. The gun that he was using was said to be of Andrew Rodrigues who was a murder accused. When Andrew was taken to the court the gun was handed over to Shishir.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm