ಬ್ರೇಕಿಂಗ್ ನ್ಯೂಸ್
05-04-23 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.5: ಬಸ್ಸಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಜೊತೆಗೆ ಕುಳಿತು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಉಜಿರೆ ಪೇಟೆಯಲ್ಲಿ ಘಟನೆ ನಡೆದಿದ್ದು ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 22 ವರ್ಷದ ಮೊಹಮ್ಮದ್ ಜಹೀರ್ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಕೆಲಸಕ್ಕಿದ್ದ ಜಹೀರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಪರಿಚಯದ ಯುವತಿಯ ಜೊತೆಗೆ ಕುಳಿತು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಹಿಂದು ಸಂಘಟನೆಯ ಗುಂಪಿಗೆ ವಿಷಯ ತಲುಪಿಸಿದ್ದಾರೆ. ಯುವತಿ ಬಸ್ ಬೆಳ್ತಂಗಡಿ ತಲುಪಿದಾಗ ಇಳಿದು ಹೋಗಿದ್ದಳು. ಉಜಿರೆ ಬಳಿ ಬಸ್ಸಿಗೆ ಹತ್ತಿದ ಯುವಕರ ಗುಂಪು ಯುವಕನನ್ನು ಅವಾಚ್ಯ ಪದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಜಹೀರ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Karnataka Police have booked four persons in connection with assaulting a Muslim youth for talking to a Hindu girl, his friend on a bus in Ujire near Mangaluru in Dakshina Kannada district, police said on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm