ಬ್ರೇಕಿಂಗ್ ನ್ಯೂಸ್
14-04-23 04:12 pm Bangalore Correspondent ಕ್ರೈಂ
ಬೆಂಗಳೂರು, ಎ.14 : ಮನೆಯಲ್ಲಿ ಕುಳಿತೇ ಹಣ ಗಳಿಸುವುದು ಹೇಗೆ, ಐಎಎಸ್- ಐಪಿಎಸ್ ಪರೀಕ್ಷೆ ಪಾಸಾಗುವುದು ಹೇಗೆ, ಸ್ವೋದ್ಯೋಗ ಆರಂಭಿಸಿ ಲಾಭ ಗಳಿಸುವುದು ಹೇಗೆ ಇತ್ಯಾದಿ ಸಲಹೆ ನೀಡುವ ನೆಪದಲ್ಲಿ ‘ಇಂಡಿಯನ್ ಮನಿ ಡಾಟ್ ಕಾಮ್’ ಎನ್ನುವ ಕಂಪನಿ ಸ್ಥಾಪಿಸಿ ಸಾವಿರಾರು ಜನರಿಂದ ‘ಚಂದಾದಾರಿಕೆ’ ರೂಪದಲ್ಲಿ ಹಣ ಪಡೆದು ವಂಚಿಸಿರುವ ಬಗ್ಗೆ ಬೆಂಗಳೂರು ಪೊಲೀಸರು ಕಂಪನಿಯ ಮುಖ್ಯಸ್ಥನ ವಿರುದ್ಧ ಪ್ರತ್ಯೇಕ ಆರು ಎಫ್ಐಆರ್ ದಾಖಲಿಸಿದ್ದಾರೆ.
ಅರೆಕಾಲಿಕ ಕೆಲಸದ ಹೆಸರಿನಲ್ಲಿ ಯುವಕ– ಯುವತಿಯರನ್ನು ವಂಚಿಸಿರುವ ಪ್ರಕರಣದ ತನಿಖೆ ಕೈಗೊಂಡಿರುವ ಬನಶಂಕರಿ ಠಾಣೆ ಪೊಲೀಸರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ರಘು ಅವರನ್ನು ಬಂಧಿಸಿದ್ದಾರೆ. ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಂಪನಿಯ ಆಮಿಷಕ್ಕೆ ಒಳಗಾಗಿ ಕೆಲ ತಿಂಗಳು ಕೆಲಸ ಮಾಡಿ ವೇತನ ಸಿಗದೆ ವಂಚನೆಗೀಡಾಗಿದ್ದ ಯುವಕ– ಯುವತಿಯರು ಬನಶಂಕರಿ ಠಾಣೆಯಲ್ಲಿ ಏಪ್ರಿಲ್ 4ರಂದು ದೂರು ಸಲ್ಲಿಸಿದ್ದರು.
ಇದರ ಮಧ್ಯೆಯೇ ಕಂಪನಿಯ ಕೆಲ ಉದ್ಯೋಗಿಗಳು ಪ್ರತ್ಯೇಕ ದೂರು ನೀಡಿದ್ದಾರೆ. ಇದರನ್ವಯ ಹೊಸದಾಗಿ ಐದು ಎಫ್‌ಐಆರ್ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಸುಧೀರ್ ಹಾಗೂ ರಘು ಬಂಧನವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕೆಲಸ ಮಾಡುವ ಉದ್ಯೋಗಿಗಳು ಮಾತ್ರವಲ್ಲದೇ, ಜನರಿಗೂ ಕಂಪನಿಯಿಂದ ವಂಚನೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬರುತ್ತಿದೆ. ವಂಚನೆ ಉದ್ದೇಶದಿಂದಲೇ ಕಂಪನಿಯವರು ‘ಫ್ರೀಡಂ ಆ್ಯಪ್’ ಅಭಿವೃದ್ಧಿಪಡಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಆರು ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆಗಿರುವ ಅನುಮಾನವಿದೆ. ತನಿಖೆ ಹೊಣೆಯನ್ನು ಸಿಸಿಬಿಗೆ ವಹಿಸಲು ಚಿಂತನೆ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷಿಯಲ್ಲಿ ಸಾಧನೆ ಮಾಡಿರುವ ರೈತರು ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಧಿಕಾರಿಯಾದವರ ಹೆಸರನ್ನು ಕಂಪನಿ ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ಹೇಳಿದರು.
ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಫೋಟೊ ಹಾಗೂ ಹೆಸರು ಹೇಳಿಕೊಂಡು ಅಮಾಯಕ ಯುವಕರ ದಿಕ್ಕು ತಪ್ಪಿಸಲಾಗಿದೆ. ಚನ್ನಣ್ಣನವರ ರೀತಿಯಲ್ಲಿ ನೀವೂ ಐಪಿಎಸ್ ಅಧಿಕಾರಿಯಾಗಬಹುದೆಂದು ಹೇಳಿ ತರಬೇತಿ ನೆಪದಲ್ಲಿ ಹಣ ಪಡೆದು ವಂಚಿಸಿರುವ ಮಾಹಿತಿ ಇದೆ. ಈ ಬಗ್ಗೆ ಚನ್ನಣ್ಣನವರ ಅವರಿಂದ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
‘ಕೃಷಿಯಲ್ಲಿ ಲಕ್ಷ ಲಕ್ಷ ಗಳಿಸುವುದು ಹೇಗೆ? ಉದ್ಯಮ ಆರಂಭಿಸುವುದು ಹೇಗೆ? ಮನೆಯಲ್ಲೇ ಕುಳಿತು ದುಡಿಯುವುದು ಹೇಗೆ? ಹೀಗೆ ಸ್ಪರ್ಧಾತ್ಮಕ ಪರೀಕ್ಷೆ ಸೇರಿ 30ಕ್ಕೂ ಹೆಚ್ಚು ವಿಷಯಗಳ ಬಗ್ಗೆ ಆ್ಯಪ್ ಮೂಲಕ ಕೋರ್ಸ್ ನಡೆಸಲಾಗುತ್ತಿತ್ತು. ಚಂದಾದಾರಿಕೆ ಹೆಸರಿನಲ್ಲಿ ಜನರಿಂದ ಹಣ ಪಡೆದಿದ್ದ ಕಂಪನಿ, ಯಾವುದೇ ತರಬೇತಿ ನೀಡದೇ ವಂಚಿಸಿರುವ ಬಗ್ಗೆ ಉದ್ಯೋಗಿಗಳೇ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು. 30ಕ್ಕೂ ಹೆಚ್ಚು ಕೋರ್ಸ್‌ಗಳಿಗಾಗಿ ಜನರನ್ನು ಕರೆತರುವಂತೆ ನಮಗೆ ಹೇಳಿದ್ದರು. ನಾವೇ ಜನರನ್ನು ಹುಡುಕಿ ಕೋರ್ಸ್‌ಗೆ ಸೇರಿಸಿದ್ದೆವು. ಅವರಿಂದ ಕಂಪನಿಯವರು ಲಕ್ಷಾಂತರ ಹಣ ಕಟ್ಟಿಸಿಕೊಂಡಿದ್ದರು. ಆದರೆ, ಜನರಿಗೆ ಯಾವುದೇ ತರಬೇತಿ ನೀಡದೇ ಸಿಇಒ ಹಾಗೂ ಇತರರು ವಂಚಿಸಿದ್ದಾರೆ’ ಎಂಬುದಾಗಿ ಕಂಪನಿಗೆ ಸಂಬಂಧಿಸಿದ ಮೂವರು ವ್ಯವಸ್ಥಾಪಕರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
Indian Money Freedom app CEO C S Sudheer was sent to 14-day judicial custody by the Karnataka court on Tuesday in connection with a cheating case. Banashankari police had arrested Sudheer on Tuesday. He was accused of collecting large sums of money by promising jobs to several people. Several complaints were registered against Sudheer and 22 other employees of his company at Banashankari police station.
25-11-24 05:51 pm
Bangalore Correspondent
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm