ಬ್ರೇಕಿಂಗ್ ನ್ಯೂಸ್
14-04-23 10:19 pm Mangalore Correspondent ಕ್ರೈಂ
ಮಂಗಳೂರು, ಎ.14 : ನಗರದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಗೋರಿಗುಡ್ಡೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂಲತಃ ಬೀದರ್ ನಿವಾಸಿ ಪ್ರಜ್ವಲ್ ಫಿನೆಹೌಸ್ (26), ಕುಲಶೇಖರದಲ್ಲಿ ವಾಸಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿ, ಸಕಲೇಶಪುರ ಬೈಕರಪಳ್ಳಿ ನಿವಾಸಿ ಧ್ರುವ ಶೆಟ್ಟಿ (19) ಮತ್ತು ಕುಳಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವಾನಿ (22) ಬಂಧಿತ ಆರೋಪಿಗಳು. ಆರೋಪಿಗಳಿಂದ 1.40 ಲಕ್ಷ ರೂ. ಮೌಲ್ಯದ 5.4 ಕಿಲೋ ಗಾಂಜಾ, 4 ಮೊಬೈಲ್, 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಠಾಣೆಯ ಪಿಎಸ್‌ಐ ಶೀತಲ್ ಅವರಿಗೆ ಬಂದ ಮಾಹಿತಿಯಂತೆ ಆರೋಪಿ ಪ್ರಜ್ವಲ್ ಫಿನೆಹೌಸ್ ನನ್ನು ದಸ್ತಗಿರಿ ಮಾಡಿದ್ದು ಆತನ ಮಾಹಿತಿಯಂತೆ ಉಳಿದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ಮಹಾರಾಷ್ಟ್ರದಿಂದ ಗಾಂಜಾವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಹಾಗೂ ಶಿವಾನಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಪ್ರಜ್ವಲ್ ವಿರುದ್ದ 2021ರಲ್ಲಿ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ದ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The south station police and the CCB unit conducted a joint operation resulting in the arrest of three ganja peddlers, including a girl who is a medical student.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm