ಬ್ರೇಕಿಂಗ್ ನ್ಯೂಸ್
19-04-23 04:46 pm HK News Desk ಕ್ರೈಂ
ಧಾರವಾಡ, ಎ.19: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಗಳವಾರ ತಡರಾತ್ರಿ ಕೆಲವು ಕಾರಣಗಳಿಗೆ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕು ಇರಿತದಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ರಾಜಕೀಯ ವಿಷಯವಾಗಿಯೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರವೀಣ ಕಮ್ಮಾರ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡಿದ್ದ. ನಿನ್ನೆ ತಾನೇ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್‍ಯಾಲಿಯಲ್ಲೂ ಭಾಗಿಯಾಗಿದ್ದರು. ಆದರೆ, ಅದೇ ದಿನ ರಾತ್ರಿ ಕೋಟೂರಿನಲ್ಲಿ ನಡೆದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಕಮ್ಮಾರನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
![]()
ಸಂಸದ ತೇಜಸ್ವಿ ಸೂರ್ಯ ಕಂಬನಿ
BJYM ಧಾರವಾಡ ಘಟಕದ ಕಾರ್ಯನಿರ್ವಾಹಕ ಸದಸ್ಯ ಹಾಗೂ ಕೊಟ್ಟೂರು ಗ್ರಾಮ ಪಂಚಾಯತ್ ವಿಪಿ ಪ್ರವೀಣ್ ಕಮ್ಮಾರ್ ಅವರ ಹತ್ಯೆಯ ಸುದ್ದಿ ತೀವ್ರ ದುಃಖ ತರಿಸಿದೆ. ನಿನ್ನೆ ತಡರಾತ್ರಿ ಶಂಕಿತ ರಾಜಕೀಯ ವಿರೋಧಿಗಳು ಪ್ರವೀಣ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಂತಕರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸುತ್ತೇವೆ ಮತ್ತು ಅವರ ಸದ್ಗತಿಗಾಗಿ ಪ್ರಾರ್ಥಿಸುತ್ತೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ರು.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ಧಾರವಾಡ ಎಸ್ಪಿ ಲೋಕೇಶ ಜಗಲಾಸರ್, ಗರಗ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ತಿಳಿಸಿರುವ ಆರೋಪಿಗಳ ಪೈಕಿ ರಾಘವೇಂದ್ರ ಪಠಾತ್ ಸೇರಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರವೀಣ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಯುವ ಮೋರ್ಚಾ ಮೌನ ಪ್ರತಿಭಟನೆ ನಡೆಸುತ್ತಿದೆ. ಡಿಸಿ ಕಚೇರಿ ಎದುರು ನೂರಕ್ಕೂ ಹೆಚ್ಚು ಕಾರ್ಯಕರ್ತರು ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜಕೀಯ ದ್ವೇಷದಿಂದಲೇ ಕೊಲೆ ಮಾಡಿದ್ದಾರೆ. ಈ ಹಿನ್ನೆಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಇದು ರಾಜಕೀಯ ಕೊಲೆ ಎಂದು ಕಡ್ಡಿ ಮುರಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
BJP youth leader Praveen Kammar murdered in Dharwad, Pralhad Joshi says it's political revenge murder. Praveen Kammar (36), vice-president of Kotur Gram Panchayat and leader of BJP Yuva Morcha, was stabbed to death by a group of youths at the village at around 10:30 pm on Tuesday. Praveen was shifted to the district civil hospital and later to SDM Medical College hospital, where he succumbed to injuries.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm