ಬ್ರೇಕಿಂಗ್ ನ್ಯೂಸ್
28-10-20 11:55 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28: ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ನಡೆದು ನವ ದಂಪತಿ ಸಾವನ್ನಪ್ಪಿದ ಪ್ರಕರಣದಿಂದ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಇಂದು ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ರಸ್ತೆ ಕಾಮಗಾರಿ ನಡೆಸಿದ ನವಯುಗ ಕನ್ ಸ್ಟ್ರಕ್ಷನ್ ಸಂಸ್ಥೆಯ ಅಧಿಕಾರಿಗಳು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಕಮಿಷನರ್ ವಿಕಾಸ್ ಕುಮಾರ್ ಸ್ಥಳದ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಆಗುತ್ತಿರುವುದಕ್ಕೇನು ಕಾರಣ ಎಂಬ ಬಗ್ಗೆ ಹೈವೇ ಅಥಾರಿಟಿ ಮತ್ತು ಟ್ರಾಫಿಕ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.






ಓವರ್ ಬ್ರಿಡ್ಜ್ ಕೊನೆಯಲ್ಲಿ ಪಾಸಿಂಗ್ ಕೊಟ್ಟಿರುವುದು ಅಪಾಯಕಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುವ ಭಾಗದಲ್ಲಿ ಹೀಗೆ ಪಾಸಿಂಗ್ ವ್ಯವಸ್ಥೆ ಕೊಡಬಾರದು. ಹೆದ್ದಾರಿಯಲ್ಲಿ ವಾಹನಗಳಿಗೆ ನೇರವಾಗಿ ಸಾಗಲು ವ್ಯವಸ್ಥೆ ಇರಬೇಕೆಂದು ತೀರ್ಮಾನಕ್ಕೆ ಬಂದಿದ್ದೇವೆ. ಜೊತೆಗೆ, ಈ ಭಾಗದಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಉಳ್ಳಾಲಕ್ಕೆ ತೆರಳಲು ಬೇರೆ ಸರ್ವಿಸ್ ರೋಡ್ ಬಳಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಏನೆಲ್ಲಾ ಪರ್ಯಾಯ ಕ್ರಮ ಕೈಗೊಳ್ಳಬಹುದು ಅದನ್ನು ಮಾಡುತ್ತೇವೆ. ಅಪಘಾತ ವಲಯ ಆಗುವುದನ್ನು ತಪ್ಪಿಸುತ್ತೇವೆ ಎಂದು ಹೇಳಿದರು.
ಸೋಮವಾರ ಸಂಜೆ ಓವರ್ ಬ್ರಿಡ್ಜ್ ಕೊನೆಯಲ್ಲಿ ಬೈಕಿನಲ್ಲಿ ದಂಪತಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದಾಗ, ಹೆದ್ದಾರಿಯಲ್ಲಿ ಬಂದಿದ್ದ ಟ್ರಕ್ ಬೈಕ್ ಮೇಲಿನಿಂದಲೇ ಹರಿದು ಹೋಗಿ ಭೀಕರ ಅಪಘಾತ ಆಗಿತ್ತು. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಕೆಯ ಪತಿ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಪ್ರಾಣ ಕಳಕೊಂಡಿದ್ದರು. ಅಪಘಾತ ಘಟನೆಗೆ ಇಲ್ಲಿನ ಅವೈಜ್ಞಾನಿಕ ರಸ್ತೆ ತಿರುವು ಕಾರಣ. ಓವರ್ ಬ್ರಿಡ್ಜ್ ಕಾಮಗಾರಿ ವೇಳೆ ಸೂಕ್ತ ಮಾನದಂಡ ಪಾಲಿಸದ ಕಾರಣ ಪದೇ ಪದೇ ಅಪಘಾತಗಳಾಗುತ್ತಿವೆ ಎಂದು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
City police commissioner Vikas Kumar on Wednesday, visited the spot at Thokkottu where newly married couple Rayan and Priya was killed in a tragic accident on October 27.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm