ಬ್ರೇಕಿಂಗ್ ನ್ಯೂಸ್
23-05-23 04:48 pm HK News Desk ಕ್ರೈಂ
ಮೈಸೂರು, ಮೇ 23: ಬೆಲೆಬಾಳುವ ತಿಮಿಂಗಲದ ಅಂಬರ್ ಗ್ರೀಸ್( ತಿಮಿಂಗಿಲ ವಾಂತಿ) ಮಾರಾಟ ಮಾಡಲು ಪ್ರಯತ್ನಿಸಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ
ಜಿಲ್ಲಾ ಎಸ್‌ಪಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, 9 ಕೆಜಿ, 821 ಗ್ರಾಂ ತೂಕದ ಅಂದಾಜು 25 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ಅನ್ನು ಮೂವರು ವ್ಯಕ್ತಿಗಳು ಕೇರಳ ಮೂಲದಿಂದ ಎಚ್.ಡಿ ಕೋಟೆ ಗಡಿಯಲ್ಲಿ ತಂದು ಅದನ್ನು ಬೆಂಗಳೂರಿಗೆ ಸಾಗಿಸಲು ಪ್ಲಾನ್ ಮಾಡಿದ್ದರು.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚುವರಿ ತನಿಖೆಗೆ ವಿಶೇಷ ಪೊಲೀಸರ ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು. ಎಫ್‌ಎಸ್‌ಎಲ್ ವರದಿಯ ಆಧಾರದ ಮೇಲೆ ತಿಮಿಂಗಲದ ಅಂಬರ್ ಗ್ರೀಸ್ ಎನ್ನುವುದನ್ನು ಖಚಿತಪಡಿಸಲಾಗಿದೆ.
ಅರಣ್ಯ ಇಲಾಖೆ ನಡೆಸಿದ ಪರೀಕ್ಷೆಯಲ್ಲೂ ತಿಮಿಂಗಲದ ವಸ್ತು ಎನ್ನುವುದು ದೃಢವಾಗಿದೆ. ಮಾತ್ರವಲ್ಲದೇ ಅರಣ್ಯ ಇಲಾಖೆಯ ಮಾಹಿತಿ ಪ್ರಕರಣ ಇದರ ಮೌಲ್ಯ ಪ್ರಸ್ತುತ ದೇಶ-ವಿದೇಶದ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 1.50ರಿಂದ 2 ಕೋಟಿ ಬೆಲೆ ಬಾಳುತ್ತದೆ ಎಂದು ತಿಳಿಸಿದರು.
ಆರೋಪಿಗಳು ಬೇರೆ ವ್ಯಕ್ತಿಗಳಿಂದ ಈ ತಿಮಿಂಗಿಲದ ವಾಂತಿಯನ್ನು ಪಡೆದುಕೊಂಡು ಬೆಂಗಳೂರಿಗೆ ತೆರಳಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಈ ಪ್ರಕರಣದಲ್ಲಿ ಹಲವರು ಶಾಮೀಲಾಗಿರುವುದು ಕಂಡುಬಂದಿದೆ. ಹೀಗಾಗಿ ಸಮಗ್ರ ತನಿಖೆ ನಡೆಸಲಾಗುತ್ತಿದೆ.
ನ್ಯಜೀವಿ ಸಂರಕ್ಷಣೆ ಕಾಯಿದೆ ಪ್ರಕಾರ ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅಂಬರ್ ಗ್ರೀಸ್ ಅನ್ನು ಸಾಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿ, ಈ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಂದ ಹಲವಾರು ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಈ ಹಂತದಲ್ಲಿ ಕೆಲವನ್ನು ಹೇಳಲಾಗದು. ದುಬೈಗೆ ಸಾಗಿಸುವುದರಿಂದ ಅಂತಾರಾಷ್ಟ್ರೀಯ ಮಟ್ಟದ ಜಾಲವಾಗಿರಬಹುದೆಂಬ ಅನುಮಾನವಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ವಿವರಿಸಿದರು.
ಈ ವೇಖೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ, ಇನ್‌ಸ್ಪೆಕ್ಟರ್ ಶಬ್ಬೀರ್ ಹುಸೇನ್, ಸೆನ್ ಪೊಲೀಸ್ ಠಾಣೆ ಪಿಐ ಪುರುಷೋತ್ತಮ್ ಹಾಜರಿದ್ದರು
Police in Heggadadevanakote town in the Mysuru district of Karnataka have arrested three people from Kerala who were attempting to sell whale's rare ambergris. Whale ambergris or vomit worth 25 crores was recovered from the possession of the accused.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm