ಬ್ರೇಕಿಂಗ್ ನ್ಯೂಸ್
29-05-23 09:34 pm HK News Desk ಕ್ರೈಂ
ನವದೆಹಲಿ, ಮೇ 29: 16 ವರ್ಷದ ತರುಣಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ 34 ಬಾರಿ ಚುಚ್ಚಿ ಚುಚ್ಚಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ದಾರಿಹೋಕರು ನಡೆದು ಹೋಗುತ್ತಿದ್ದಂತೆಯೇ ಕಟುಕ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ.
ದೆಹಲಿಯ ಶಹಬಾದ್ ಡೈರಿ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, ಜನರು ನಡೆದು ಹೋಗುವ ಕಾಲುದಾರಿಯಲ್ಲೇ ಯುವಕ ಚಾಕುವಿನಲ್ಲಿ ಚುಚ್ಚಿ ಚುಚ್ಚಿ ಕೃತ್ಯ ಎಸಗಿದ್ದಾನೆ. ಸಾಕ್ಷಿ ಎಂಬ 16 ವರ್ಷದ ಯುವತಿಯನ್ನು ಸಾಹಿಲ್ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇವರಿಬ್ಬರು ಪ್ರೀತಿಸುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವೈಮನಸ್ಸು ಉಂಟಾಗಿತ್ತು. ನಿನ್ನೆ ಸಂಜೆ ಶಹಬಾದ್ ಡೈರಿ ಪ್ರದೇಶದಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಎದುರುಗೊಂಡ ಯುವಕ, ನೇರವಾಗಿ ಚಾಕುವಿನಲ್ಲಿ ತಿವಿದು ಹಾಕಿದ್ದಾನೆ. ಆನಂತರ, ಕಲ್ಲನ್ನು ತಲೆಗೆ ಎತ್ತಿ ಹಾಕಿ, ಕಾಲಿನಲ್ಲಿ ತುಳಿದು ಅತ್ಯಂತ ಪೈಶಾಚಿಕವಾಗಿ ಕೊಂದು ಹಾಕಿದ್ದಾನೆ. ಎಲ್ಲರೂ ನೋಡ ನೋಡುತ್ತಲೇ ಕೃತ್ಯ ನಡೆದಿದ್ದು, ಬಳಿಕ ಯುವಕ ಅಲ್ಲಿಂದ ಹಿಂತಿರುಗಿದ್ದಾನೆ.

ಪೊಲೀಸರ ಪ್ರಕಾರ, ಯುವತಿ ಆಕೆಯ ಗೆಳತಿಯ ಮಗುವಿನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆಂದು ಹೊರಟಿದ್ದಳು. ಯುವಕ ಹಿಂಬಾಲಿಸುತ್ತಾ ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಆರೋಪಿ ಸಾಹಿಲ್ ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಬಳಿಕ ಉತ್ತರ ಪ್ರದೇಶದ ಬುಲಂದ್ ಶಹರ್ ಎಂಬಲ್ಲಿಂದ ಪತ್ತೆ ಮಾಡಿದ್ದಾರೆ.
ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಘಾತ ವ್ಯಕ್ತಪಡಿಸಿದ್ದು, ಜನರು ನೋಡ ನೋಡುತ್ತಿರುವಾಗಲೇ ಈ ರೀತಿ ಕೃತ್ಯ ನಡೆದಿರುವುದು ಆಘಾತಕಾರಿ. ಹಂತಕರಿಗೆ ಪೊಲೀಸರ ಭಯ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಗವರ್ನರ್ ಜವಾಬ್ದಾರಿ. ಜನರ ಸುರಕ್ಷತೆಗಾಗಿ ಕೂಡಲೇ ಏನಾದರೂ ವ್ಯವಸ್ಥೆ ಮಾಡಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು 35 ತುಂಡುಗಳನ್ನಾಗಿ ಕತ್ತರಿಸಿ ಎಸೆದು ಬಂದಿದ್ದ ಕೃತ್ಯ ಬೆಳಕಿಗೆ ಬಂದಿತ್ತು.
A 16-year-old girl was murdered - allegedly by her boyfriend, a 20-year-old man - in Delhi on Sunday, police in the national capital said this morning. The accused - identified as Sahil - was arrested from Bulandshahr in Uttar Pradesh hours after the gruesome crime. Preliminary findings from the postmortem indicate the girl was stabbed 34 times and her skull ruptured after it was bashed in by a blunt object. The detailed report has yet to be released.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm