ಬ್ರೇಕಿಂಗ್ ನ್ಯೂಸ್
04-06-23 12:47 pm HK News Desk ಕ್ರೈಂ
ಚಿಕ್ಕಮಗಳೂರು, ಜೂನ್ 4: ತರೀಕೆರೆಯ ನೂತನ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಲಾಗಿದೆ.
ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿದ್ದು ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಗಲಾಟೆ ನಡೆದು ಚಾಕು ಇರಿತ ಮಾಡಲಾಗಿದೆ. ಚಾಕು ಇರಿತದಿಂದ ವರುಣ್ (28) ಎಂಬ ಯುವಕ ಸಾವು ಕಂಡಿದ್ದಾನೆ. ಮಂಜು ಹಾಗೂ ಸಂಜು ಎಂಬುವರು ಗಾಯಗೊಂಡಿದ್ದಾರೆ. ಶಾಸಕ ಶ್ರೀನಿವಾಸ್ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದು ಕಾರ್ಯಕ್ರಮದ ಬಳಿಕ ಆರ್ಕೆಸ್ಟ್ರಾ ನಡೆಸಲಾಗಿತ್ತು.


ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಮೇಲೆ ಕಬಾಬ್ ಮೂರ್ತಿ ಡ್ರ್ಯಾಗರ್ ಹಾಕಿದ್ದಾನೆ. ಅಡ್ಡ ಬಂದ ಮಂಜು ಹಾಗೂ ಸಂಜು ಕೈ, ಕಾಲಿಗೆ ಇರಿತದ ಗಾಯ ಆಗಿದೆ. ವರುಣ್ ಗೆ ಹೊಟ್ಟೆ ಹಾಗೂ ಪಕ್ಕೆಲುಬಿಗೆ ಇರಿತ ಆಗಿದ್ದು ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದಿದ್ದು ಅಷ್ಟರಲ್ಲಿ ವರುಣ್ ಸಾವು ಕಂಡಿದ್ದಾನೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
A programme to felicitate newly elected MLA G. H. Srinivas ended with a murder in Tarikere of Chikkamagaluru late on June 3. Following a heated argument over playing a song on the sound system, a 28-year-old was stabbed to death. The deceased has been identified as Pakali Varun, a resident of Tarikere. Even as the programme was about to end, the party workers had an argument over playing a song for a group dance. He was rushed to Mc Gann Hospital where he succumbed to injuries.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm