ಬ್ರೇಕಿಂಗ್ ನ್ಯೂಸ್
09-06-23 01:20 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಮಾದಕ ವಸ್ತು (Methylene dioxy methamphetamine) MDMA ಡ್ರಗ್ಸ್ ಅನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಿಂದ ನಿಷೇಧಿತ ಡ್ರಗ್ಸ್ MDMA ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಫರಂಗಿಪೇಟೆ ಅಮ್ಮೆಮಾರ್ ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 3230/-, KA-19-MF-6668 ನೇ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ ರೂ. 13,06,230/- ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ @ ಛೋಟಾ ಅಶ್ರಫ್ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ 6 ಗಾಂಜಾ ಪ್ರಕರಣಗಳು ದಾಖಲಾಗಿವೆ. ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ.
Mangalore Two arrested by CCB police for selling Synthetic drugs. They were trying to sell drugs in car.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm