ಬ್ರೇಕಿಂಗ್ ನ್ಯೂಸ್
15-06-23 12:25 pm HK News Desk ಕ್ರೈಂ
ಶಿವಮೊಗ್ಗ, ಜೂ 15: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಇಲಿಯಾಜ್ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಶಿವಮೊಗ್ಗ ನಗರದ ಮಂಡ್ಲಿ ನಿವಾಸಿ ಆಸೀಫ್ (25) ಎಂದು ಗುರುತಿಸಲಾಗಿದೆ. ಕೊಲೆಯಾದ ಆಸೀಫ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಕೊಲೆ ಮಾಡಿದ ಆರೋಪಿ ಜಬೀ (25) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಕ್ಷಣಾರ್ಧದಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಜಬೀ ಸಹೋದರಿಯ ಪುತ್ರಿಯ ಹಿಂದೆ ಆಸೀಫ್ ಬಿದ್ದಿದ್ದ. ತನ್ನ ಸಹೋದರಿಯ ಪುತ್ರಿಗೆ ತೊಂದರೆ ನೀಡಬೇಡ ಎಂದು ಜಬೀ ಆಸೀಫ್ ಗೆ ಎಚ್ಚರಿಕೆ ನೀಡಿದ್ದ. ಆದರೂ ಆಸೀಫ್ ತನ್ನ ಚಾಳಿ ಮುಂದುವರಿಸಿದ್ದ. ಇದರಿಂದ ಕೆರಳಿದ ಜಬೀ ಬುಧವಾರ ರಾತ್ರಿ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಆಸೀಫ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾನೆ.
ಘಟನೆ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಲೆಯಾದ ಆಸೀಫ್ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
Love matter, Youth brutally murderd in Shivamogga, accused arrested within hours by Police. The deceased has been identified as Asif (25). The accused arrested is identified as Jabbi
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm