ಬ್ರೇಕಿಂಗ್ ನ್ಯೂಸ್
16-06-23 06:40 pm HK News Desk ಕ್ರೈಂ
ತುಮಕೂರು, ಜೂನ್ 16: ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಓಡಿಹೋಗಿದ್ದ ಕಾರಣಕ್ಕೆ ಅಪ್ರಾಪ್ತ ಬಾಲಕಿಯನ್ನು ಹೆತ್ತವರೇ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮರ್ಯಾದೆಗೆ ಅಂಜಿ ಮಗಳನ್ನೇ ಕೊಲೆಗೈದಿದ್ದಲ್ಲದೆ, ಆತ್ಮಹತ್ಯೆ ಎಂದು ಬಿಂಬಿಸಿದ್ದ ಕೃತ್ಯ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಚಿಕ್ಕಹೆಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಕೃತ್ಯ ಎಸಗಿರುವ ಮೂವರನ್ನು ಬಂಧಿಸಿದ್ದಾರೆ. ನೇತ್ರಾವತಿ (17) ಕೊಲೆಯಾದ ಅಪ್ರಾಪ್ತ ಬಾಲಕಿಯಾಗಿದ್ದು, ಆಕೆಯ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಅವರನ್ನು ಬಂಧಿಸಿದ್ದಾರೆ.
ನೇತ್ರಾವತಿ ಶಿರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಯುವಕ ಕುಮಾರ್ (21) ಎಂಬಾತನನ್ನ ಪ್ರೀತಿಸಿದ್ದು ಜೂನ್ 7 ರಂದು ಮನೆ ಬಿಟ್ಟು ಓಡಿಹೋಗಿದ್ದರು. ಮಾರನೇ ದಿನ ಇಬ್ಬರನ್ನೂ ಕರೆಸಿ ಎರಡು ಕುಟುಂಬಗಳ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿಸಲಾಗಿತ್ತು. ಬಾಲಕಿಯ ಸಹವಾಸಕ್ಕೆ ಬಾರದಂತೆ ಯುವಕನಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಆನಂತರ, ಬಾಲಕಿ ನೇತ್ರಾವತಿಯನ್ನು ಹೆತ್ತವರು ತಮ್ಮ ಮನೆಗೆ ಕರೆತಂದಿದ್ದರು. ಆದರೆ, ಅದೇ ದಿನ ರಾತ್ರಿ ಬಾಲಕಿಯನ್ನು ತಂದೆ, ಸಹೋದರ ಹಾಗೂ ಚಿಕ್ಕಪ್ಪ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಗಳು ವಿಷ ಕುಡಿದು ಆತ್ಮಹತ್ಯೆ ಮಾಡಿದ್ದಾಳೆಂದು ಬಿಂಬಿಸಿದ್ದ ಕುಟುಂಬಸ್ಥರು, ಕೊಲೆಯ ಕುರುಹು ಸಿಗದಂತೆ ಮೃತದೇಹವನ್ನ ಸುಟ್ಟುಹಾಕಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಶಿರಾ ಡಿವೈಎಸ್ ಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೂವರನ್ನು ಬಂಧಿಸಿರುವ ಚೇಳೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
A minor girl was strangled to death by her father, brother and uncle in Karnataka's Tumakuru district in a case of honour killing. The tragic incident occurred after the 17-year-old victim, Netravati's family became enraged that she was in love with a boy belonging to a Scheduled Caste.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
18-04-25 08:14 pm
HK News Desk
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am