ಬ್ರೇಕಿಂಗ್ ನ್ಯೂಸ್
16-06-23 10:11 pm Udupi Correspondent ಕ್ರೈಂ
ಉಡುಪಿ, ಜೂನ್ 16: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್‌ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
Under the guidance of Udupi SP Akshay Machindra Hakay, a police team led by Manipal police inspector Devaraj T V has intensified its crackdown on drug-related activities. On Friday, June 16, the team apprehended two law students who were attempting to sell MDMA drugs near Ishwar Nagar apartment in Herga village.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm