ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್‌ಮೆಂಟ್ ಕಟ್ಟಡದ 2 ಅಪಾರ್ಟ್‌ಮೆಂಟ್‌ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್‌ಮೆಂಟ್‌ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್‌ಗಳು, ಸ್ಕ್ರೂಡ್ರೈವರ್‌ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm