ದೇರಳಕಟ್ಟೆ ; ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಯುವಕ ಬಂಧನ 

17-06-23 02:16 pm       Mangalore Correspondent   ಕ್ರೈಂ

ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಉಳ್ಳಾಲ, ಜೂನ್ 17: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಕುಂಪಲ ಸಮೀಪದ ಬಗಂಬಿಲ ನಿವಾಸಿ ಅಕ್ಷಯ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ.ಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿ ಅಕ್ಷತ್ ಕುಮಾರ್(34) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನಿಂದ ಒಟ್ಟು 72 ಗ್ರಾಂ ತೂಕದ ರೂ. 3,66,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, 20,880 ರು. ನಗದು, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ  ಹಾಗೂ ಕೊಣಾಜೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Derlakatte, One arrested over possession of MDMA drug worth Rs 3.66 lakh in Mangalore. Akshath Kumar (34), resident of Bagambila, Vaidyanatha Nagar of Kotekar village is the accused in police custody now.