ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm