ದೇವರಮನೆ ಬೆಟ್ಟದಲ್ಲಿ ಯುವಕನ ಶವ ಪತ್ತೆ ; ಗಾಂಜಾ ಡೀಲ್ ನಲ್ಲಿ ಕಿರಿಕ್ ಆಗಿ ಕೊಲೆ, ಬಂಟ್ವಾಳ ಮೂಲದ ಇಬ್ಬರ ಬಂಧನ ! 

22-06-23 11:29 am       HK News Desk   ಕ್ರೈಂ

ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೂಡಿಗೆರೆ, ಜೂನ್ 22: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.

ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗಾಂಜಾ ವ್ಯವಹಾರದಲ್ಲಿ ಕೊಲೆ :

ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.

Two arrested from Bantwal in murder of ganja peddler at Mudigere. Police cracked the murder case of a youth, whose mortal remains were thrown near tourist spot Devaramane and arrested two people in this connection. Police arrested Rizwan and Zainullah, natives of Bantwal in connection with the murder of Mohammed Sawad, also a native of Bantwal taluk.