ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm