ಬ್ರೇಕಿಂಗ್ ನ್ಯೂಸ್
28-06-23 12:59 pm HK News Desk ಕ್ರೈಂ
ಕೋಲಾರ, ಜೂನ್ 27: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್(24) ಎಂದು ಗುರುತಿಸಲಾಗಿದೆ. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಗಂಗಾಧರ್ ತಮಟೆ ಕಲಾವಿದನಾಗಿದ್ದು ಗಾರೆ ಕೆಲಸ ಮಾಡುತ್ತಿದ್ದ. ಕೀರ್ತಿ ತಂದೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದರು.
ಮೃತ ಗಂಗಾಧರ್ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದೆ. ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ.
ಗಂಗಾಧರ್ನನ್ನು ಮರೆತುಬಿಡುವಂತೆ ಪೋಷಕರು ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮಂಗಳವಾರ ಬೆಳಗ್ಗೆ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.
ಈ ಸುದ್ದಿ ಹತ್ತಿರದಲ್ಲೇ ಇದ್ದ ಗಂಗಾಧರ್ ಮತ್ತು ಅವರ ಕುಟುಂಬಕ್ಕೆ ತಲುಪಿತು. ಯಾವುದೇ ಸಮಸ್ಯೆಯಾಗದಂತೆ ಗಂಗಾಧರ್ ಅಣ್ಣ ಶ್ರೀನಿವಾಸ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ರೈಲ್ವೇ ಹಳಿ ಬಳಿ ಹೋಗುತ್ತಿದ್ದಾಗ ಗಂಗಾಧರ್ ನೀರು ಕುಡಿಯುತ್ತೇನೆ ಎಂದು ಹೇಳಿ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ.
ಗಾಡಿ ನಿಲ್ಲಿಸಿದ ಕೂಡಲೇ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಬಾಲಕಿಯ ತಂದೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಧರಣಿ ದೇವಿ ತಿಳಿಸಿದ್ದಾರೆ.
Kolar daughter killed by father for intercast love, boy commits suicide near speeding train.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm