ಇಬ್ಬರು ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ, ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ; ಯುವತಿಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಕ್ಕೆ ಶಿಕ್ಷೆ, ಏಳು ಮಂದಿ ಬಂಧನ

07-07-23 11:00 pm       HK News Desk   ಕ್ರೈಂ

ಇಬ್ಬರು ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ ಎಸಗಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಶಿವಪುರಿ ಆಡಳಿತವು ಒಂದೇ ಕುಟುಂಬದ ಏಳು ಸದಸ್ಯರನ್ನು ಬಂಧಿಸಿದೆ.

ಭೋಪಾಲ್, ಜು. 07: ಇಬ್ಬರು ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ ಎಸಗಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಶಿವಪುರಿ ಆಡಳಿತವು ಒಂದೇ ಕುಟುಂಬದ ಏಳು ಸದಸ್ಯರನ್ನು ಬಂಧಿಸಿದೆ. ಇದಲ್ಲದೆ ಆರೋಪಿಗಳ ಮನೆಗಳನ್ನು ಕೆಡವಿದೆ.

ದಲಿತ ಯುವಕರು ಆರೋಪಿಗಳ ಮನೆಯ ಯುವತಿಯೊಂದಿಗೆ ಮಾತನಾಡ ಕಾರಣ ಅಮಾನವೀಯ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆದಿತ್ತು, ಆದರೆ ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಶಿವಪುರಿ ಪೊಲೀಸ್ ಅಧೀಕ್ಷಕ (ಎಸ್‌ಪಿ) ರಘುವಂಶ್ ಸಿಂಗ್ ಭಡೋರಿಯಾ ಪ್ರಕಾರ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಯನ್ನು ಹಾಕಲು ಆದೇಶಿಸಿದ್ದಾರೆ.

"23 ಮತ್ತು 24 ವರ್ಷದ ಇಬ್ಬರು ಯುವಕರು ಆರೋಪಿಯ ಕುಟುಂಬದ 26 ವರ್ಷದ ಯುವತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಈ ವಿಷಯ ತಿಳಿದ ಮನೆಯವರು ಯುವತಿಯನ್ನು ವರ್ಖಾಡಿ ಗ್ರಾಮದಲ್ಲಿರುವ ಇಬ್ಬರನ್ನು ತಮ್ಮ ಮನೆಗೆ ಕರೆ ತರುವಂತೆ ತಿಳಿಸಿದ್ದಾರೆ. ಜೂನ್ 30 ರಂದು ಇಬ್ಬರು ಬಂದಾಗ ಮನೆಯವರು ಅಮಾನುಷವಾಗಿ ಥಳಿಸಿದ್ದಾರೆ. ಆರೋಪಿಗಳು ದಲಿತರ ಮುಖಕ್ಕೆ ಕಪ್ಪು ಬಣ್ಣ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಅವರಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ" ಎಂದು ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ ಹೇಳಿದ್ದಾರೆ.

ಆದರೆ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಅವರನ್ನು ಬುಧವಾರ ಬಂಧಿಸಿ ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Two men belonging to the Dalit community were caught and thrashed by villagers in Madhya Pradesh’s Shivpuri district after a few Muslim women accused them of harassment, police said.