ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm