ಬ್ರೇಕಿಂಗ್ ನ್ಯೂಸ್
10-07-23 10:41 pm HK News Desk ಕ್ರೈಂ
ಮೈಸೂರು, ಜುಲೈ 10: ಹನುಮಜಯಂತಿ ನಡೆಯುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡು ಸಂಧಾನಕ್ಕಾಗಿ ಕರೆದು ಯುವಕನೊಬ್ಬನ್ನು ಕೊಲೆ ಮಾಡಿದ ಘಟನೆ ತಿ.ನರಸೀಪುರ ಪಟ್ಟಣದ ಅಗ್ನಿಶಾಮಕ ದಳದ ಕಚೇರಿ ಮುಂದೆ ಮಾರುತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.
ಟಿ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಈತ ಕಳೆದ ಕೆಲವು ವರ್ಷಗಳಿಂದ ಯುವ ಬ್ರಿಗೇಡ್ ನ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದ.

ಮೊನ್ನೆ ನಡೆದ ಹನುಮ ಜಯಂತಿ ವೇಳೆ ಮೆರವಣಿಗೆಯಲ್ಲಿ ಪುನೀತ್ ರಾಜಕುಮಾರ್ ಫೋಟೋ ಇಡುವ ಸಂಬಂಧ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಸ್ಥಳದಲ್ಲಿದ್ದ ಕೆಲವರು ಈ ವೇಳೆ ಎರಡು ಗುಂಪುಗಳ ನಡುವೆ ಮಧ್ಯಸ್ಥಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು. ಆದರೆ, ಭಾನುವಾರ ಕೂಡ ಈ ಬಗ್ಗೆ ಎರಡು ಗುಂಪುಗಳ ನಡುವಿನ ಗಲಾಟೆ ನಡೆದು ಆರೋಪಿತ ಮಣಿ ಮತ್ತು ಅವರ ತಂಡ ವೇಣುಗೋಪಾಲ್ ಮೇಲೆ ಹಲ್ಲೆ ನಡೆಸಿತ್ತು, ಅಲ್ಲೂ ಕೂಡ ಕೆಲವರು ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು.
ಮತ್ತೆ ಭಾನುವಾರ ರಾತ್ರಿ 8.30 ಸಮಯದಲ್ಲಿ ಆರೋಪಿಗಳಲ್ಲಿ ಒಬ್ಬನಾದ ಮಣಿ ಎಂಬುವನು ವೇಣುಗೋಪಾಲ್ ಗೆ ಕರೆಮಾಡಿ ಮಾತನಾಡಲು ಕರೆದಿದ್ದಾನೆ. ಆದರೆ, ವೇಣುಗೋಪಾಲ್ ಹೋಗಲು ನಿರಾಕರಿಸಿದ್ದನು. ನಂತರ ವೇಣುಗೋಪಾಲ್ ತನ್ನ ಸ್ನೇಹಿತರ ಜೊತೆಗೂಡಿ ಸರ್ವಿಸ್ ಸ್ಟೇಷನ್ ಬಳಿಗೆ ಬಂದಾಗ ಏಕಾಏಕಿ ಬಾಟಲಿನಿಂದ ಹೊಡೆದು, ಹೊಟ್ಟೆಗೆ ಬಾಟಲಿಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ಸಂಬಂಧ ಪಟ್ಟಣದ ನಿವಾಸಿಗಳಾದ ಮಣಿಕಂಠ ಅಲಿಯಾಸ್ ಕೋಳಿ ಮಣಿ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ 6 ಮಂದಿ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿತರ ಇಬ್ಬರು ಪೊಲೀಸರಿಗೆ ಶರಣಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲಿಸಿದರು. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ
ಟಿ ನರಸೀಪುರ ತಾಲೂಕಿನಲ್ಲಿ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಸೆರೆಗೆ ತಂಡ ರಚನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಕ್ ನಿಲ್ಲಿಸುವ ವಿಚಾರ ಹಾಗೂ ನಟ ಅಪ್ಪು ಫೋಟೋ ವಿಚಾರವಾಗಿ ಜಗಳವಾಗಿ ಯುವಕನನ್ನ ಕೊಲೆ ಮಾಡಲಾಗಿದೆ.
Fight over Puneeth Rajkumar Photo, yuva brigade youth murdered in Mysuru, two arrested by Police.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm