ಬ್ರೇಕಿಂಗ್ ನ್ಯೂಸ್
11-07-23 07:36 pm HK News Desk ಕ್ರೈಂ
ಮೈಸೂರು, ಜುಲೈ 11: ಜಿಲ್ಲೆಯ ಟಿ.ನರಸೀಪುರದಲ್ಲಿ ಕಳೆದ ಭಾನುವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್ (31) ಹತ್ಯೆ ಪ್ರಕರಣದಲ್ಲಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳು ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಉಳಿದವರ ಪತ್ತೆಗೂ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿ. ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಹನುಮನ ಜೊತೆಗೆ ಪುನೀತ್ ಫೋಟೊ ಇಡುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಪುನೀತ್ ಫೋಟೊ ಇರಿಸುವುದಕ್ಕೆ ವೇಣುಗೋಪಾಲ ವಿರೋಧ ವ್ಯಕ್ತಪಡಿಸಿದ್ದ. ಇದೇ ವಿಚಾರದಲ್ಲಿ ಮಾತನಾಡುವ ನೆಪದಲ್ಲಿ ಕರೆದು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ. ಶನಿವಾರ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದರೂ, ಸಂಧಾನ ಮಾಡಿ ಕಳುಹಿಸಲಾಗಿತ್ತು. ಭಾನುವಾರ ಮತ್ತೆ ಜಗಳ ನಡೆದಿದ್ದು ಈ ವೇಳೆ ವೇಣುಗೋಪಾಲ್ ಮೇಲೆ ಚೂರಿಯಿಂದ ಇರಿಯಲಾಗಿತ್ತು. ಪ್ರಕರಣದಲ್ಲಿ ಯಾವುದೇ ರೀತಿಯ ಕೋಮು ದ್ವೇಷದ ವಿಷಯ ಇಲ್ಲ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.
ಇದೇ ವೇಳೆ, ಬಿಜೆಪಿ ನಾಯಕರು ಕೃತ್ಯದ ಬಗ್ಗೆ ಸತ್ಯಶೋಧನೆ ನಡೆಸಲೆಂದು ಮೈಸೂರಿಗೆ ಬಂದಿದ್ದಾರೆ. ಆದರೆ ಪೊಲೀಸರು ಬಂಧಿಸಿದ ಆರೋಪಿಗಳ ಪೈಕಿ ಶಂಕರ್ ಎಂಬಾತ ಮೈಸೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯೆಯೊಬ್ಬರ ಸೋದರ ಎನ್ನುವ ವಿಚಾರ ಹೋರಾಟಕ್ಕೆ ಇಳಿದಿದ್ದ ಬಿಜೆಪಿ ನಾಯಕರಿಗೆ ತೀವ್ರ ಇರಿಸುಮುರಿಸು ಮಾಡಿದೆ. ಹಾಗಿದ್ದರೂ, ತಂಡದ ನೇತೃತ್ವ ವಹಿಸಿದ್ದ ಬಿಜೆಪಿ ಮುಖಂಡ ಸಿಟಿ ರವಿ, ವೇಣುಗೋಪಾಲ್ ನಾಯಕ್ ನಿವಾಸಕ್ಕೆ ಭೇಟಿ ನೀಡಿದರು. ಕುಟುಂಬಸ್ಥರ ಜೊತೆಗೆ ಜೊತೆಗೆ ಮಾತುಕತೆ ನಡೆಸಿ ಮೃತನ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇದುವರೆಗೆ ರಾಜ್ಯದ 16 ರಿಂದ 17 ಕಡೆ ಈ ರೀತಿ ಘಟನೆಗಳು ನಡೆದಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಒಂದು ವಲಯದ ಜನ ಮದೋನ್ಮತ್ತ ಹಾಗೂ ಯುದ್ಧೋತ್ಸಹದಲ್ಲಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸ್ಥಿತಿ ಸೃಷ್ಟಿಯಾಗಿದೆ ಎಂದಿದ್ದಾರೆ.
ಯುವ ಬ್ರಿಗೇಡ್ ರಾಜ್ಯ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯಿಸಿ, ಕೊಲೆಯ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆಯೆಂದು ಆರೋಪಿಸಿದ್ದರು. ಬಿಜೆಪಿ ಕಾರ್ಯಕರ್ತ ಇರುವುದು ಇವರಿಗೂ ತೀವ್ರ ಹಿನ್ನಡೆ ಉಂಟುಮಾಡಿದೆ.
ಪುನೀತ್ ರಾಜಕುಮಾರ್ ಫೋಟೋ ವಿಚಾರಕ್ಕೆ ಗಲಾಟೆ ; ಬಾಟಲಿಗಳಿಂದ ಚುಚ್ಚಿ ಹಿಂದೂ ಕಾರ್ಯಕರ್ತನ ಕೊಲೆ, ಇಬ್ಬರ ಸೆರೆ !
The Mysuru district police have arrested six people in connection with the murder of a 32-year-old member of Yuva Brigade, a right-wing organisation, on Sunday during Hanuman Jayanthi celebrations on the outskirts of T Narasipura. Officials said Tuesday the arrested men have been identified as Manikanta alias Kole Mani, Sandesh, Anil, Shankar, Manju, and Haris.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 04:38 pm
Mangalore Correspondent
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am