ಬ್ರೇಕಿಂಗ್ ನ್ಯೂಸ್
12-07-23 01:14 pm HK News Desk ಕ್ರೈಂ
ಡಾರ್ಜಿಲಿಂಗ್, ಜುಲೈ 12: ಭಾರತೀಯ ಸೇನೆಯ ಕರ್ನಲ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಕಲಿ ಸೇನಾ ನೇಮಕಾತಿ ದಂಧೆ ನಡೆಸುತ್ತಿದ್ದ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.
ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಮತ್ತು ಸಿಲಿಗುರಿ ಪೊಲೀಸ್ ಗುಪ್ತಚರ ವಿಭಾಗವು ಈ ಬಗ್ಗೆ ಕಾರ್ಯಾಚರಣೆ ನಡೆಸಿದ್ದು ನಕಲಿ ಸೇನಾಧಿಕಾರಿ ದಾಲ್ ಚಂದ್ ಶರ್ಮಾ ಎಂಬಾತನನ್ನು ಬಂಧಿಸಿದೆ.
ಸೇನಾಧಿಕಾರಿಯೆಂದು ನಟಿಸುತ್ತಿದ್ದ ವ್ಯಕ್ತಿ ಸೇನೆಗೆ ಸೇರಲು ಬಯಸುವ ಯುವಕರನ್ನು ಸಂಪರ್ಕಿಸಿ, ಕೆಲಸ ತೆಗೆಸಿಕೊಡುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪ ಕೇಳಿ ಬಂದಿತ್ತು. ದಂಧೆಯ ಬಗ್ಗೆ ಮಾಹಿತಿ ಪಡೆದು ಭಾರತೀಯ ಸೇನೆ, ಸಿಲಿಗುರಿ ಪೊಲೀಸ್ ಕಮಿಷನರೇಟ್ ಅನ್ನು ಸಂಪರ್ಕಿಸಿ ಕಾರ್ಯಾಚರಣೆ ನಡೆಸಿತ್ತು. ಬಳಿಕ ಭಕ್ತಿನಗರ ಠಾಣೆಯ ಪೊಲೀಸರು ಭಾರತೀಯ ಸೇನೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಈತ ಸಿಕ್ಕಿಂ ರಾಜ್ಯದ ಗ್ಯಾಂಗ್‌ಟಾಕ್ ನಿವಾಸಿಯಾಗಿದ್ದಾನೆ.
ಆರೋಪಿ ತನ್ನನ್ನು ಭಾರತೀಯ ಸೇನೆಯ ಆರ್ಟಿಲರಿ ವಿಭಾಗದ ಲೆಫ್ಟಿನೆಂಟ್ ಕರ್ನಲ್ ಎಂದು ಹೇಳಿಕೊಂಡು ವಂಚಿಸುತ್ತಿದ್ದ. ಆರೋಪಿಯಿಂದ ಮೊಬೈಲ್ ಫೋನ್, ನಕಲಿ ಭಾರತೀಯ ಸೇನಾ ನೋಂದಣಿ ನಮೂನೆ ಮತ್ತು ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೇನೆಯಲ್ಲಿ ಅಗ್ನಿಶಾಮಕ ದಳದ ಕೆಲಸ ಕೊಡಿಸುವುದಾಗಿ ಹೇಳಿ ದಾಲ್‌ಚಂದ್ ಹಲವು ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡರಿಂದ ಎರಡುವರೆ ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿಯಾಗಲು ಸಿಲಿಗುರಿಗೆ ಬರುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿ ದಾಲ್‌ಚಂದ್ ಸೇನಾಧಿಕಾರಿಯ ಸಮವಸ್ತ್ರದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿ ಮಾಡಲು ಕಾಯುತ್ತಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a joint operation, the Military Intelligence Bureau (M.I.) and Bhakti Nagar police successfully apprehended an imposter posing as an army colonel. The arrest took place at a restaurant in Salugara, where the accused imposter, identified as Dalchand Verma (50) from Sikkim, was caught.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm