ಬ್ರೇಕಿಂಗ್ ನ್ಯೂಸ್
13-07-23 10:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 13: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಇಬ್ಬರು ಖದೀಮರು ಕಾರಿನ ಕೀ ಪಡೆದು ಎರಡು ಕಾರು ಮತ್ತು ಬೆಲೆಬಾಳುವ ಸೊತ್ತುಗಳನ್ನು ಎಗರಿಸಿದ್ದಾರೆ.
ಜುಲೈ 11ರ ರಾತ್ರಿ ಕಳ್ಳತನ ಕೃತ್ಯ ನಡೆದಿದ್ದು ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿಗೆ ತಡರಾತ್ರಿ ಕಳ್ಳರು ನುಗ್ಗಿದ್ದರು. ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ನುಗ್ಗಿದ್ದ ಕಳ್ಳರು, ಒಳಗೆ ಡ್ರಾವರ್ ನಲ್ಲಿ ತಡಕಾಡಿದ್ದಾರೆ. ಡ್ರಾವರಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಸ್ವಿಫ್ಟ್ ಮತ್ತು ಕ್ರೆಟಾ ಕಾರುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ.






6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಹಾಗೂ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕಳವು ಮಾಡಿದ್ದಾರೆಂದು ಅಬಿದ್ ಅಹ್ಮದ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇಬ್ಬರು ಆಗಂತುಕರು ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿದ್ದರು. ಗ್ಲಾಸ್ ಒಡೆಯುವ ದೃಶ್ಯ, ಕಾರು ಎಸ್ಕೇಪ್ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದ್ದು ಅದನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thieves break into used car showroom, steal cars, valuables worth lakhs at Hosabettu Junction. The car showroom is owned by Abdi Ahmed Suralpady. The gang entered the showroom by breaking open the front glass door.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm