ಬ್ರೇಕಿಂಗ್ ನ್ಯೂಸ್
21-07-23 07:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆಸಿ ರೋಡಿನ ನಿಶಾದ್ (31), ಮಹಮ್ಮದ್ ರಜೀನ್ (24) ಬಂಧಿತರು. ಕೇರಳದ ಗಡಿಭಾಗ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಸಿಲ್ವರ್ ಮತ್ತು ಕಪ್ಪು ಬಣ್ಣದ ಎರಡು ಸ್ವಿಫ್ಟ್ ಕಾರಿನಲ್ಲಿದ್ದುಕೊಂಡು ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ಮೌಲ್ಯದ 180 ಗ್ರಾಮ್ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಎರಡು ಮಾರುತಿ ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್ ಫೋನ್, 22 ಸಾವಿರ ರೂ. ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮೂವರು ಡ್ರಗ್ ಕಿಂಗ್ ಪಿನ್ ಗಳಲ್ಲಿ ಒಬ್ಬ
ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಜ್ ಮಂಗಳೂರು ಮಹಾನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುವ ಮೂವರು ಕಿಂಗ್ ಪಿನ್ ಗಳ ಪೈಕಿ ಒಬ್ಬನಾಗಿದ್ದು ಈತನ ಬಂಧನಕ್ಕಾಗಿ ಪೊಲೀಸರು ಹಲವು ಸಮಯದಿಂದ ಹೊಂಚು ಹಾಕಿದ್ದರು. ಆದರೆ ಮೊಬೈಲ್ ಫೋನಲ್ಲಿ ವಾಟ್ಸಪ್ ಕರೆ ಮಾತ್ರ ಮಾಡುವುದು, ಒಂದು ಕಡೆಗೆ ಹೋದ ದಿನ ಮತ್ತೆ ಹೋಗದೇ ಇರುವುದು, ಹೀಗೆ ಪೊಲೀಸರು ಬೆನ್ನು ಬಿದ್ದಾಗ ಕೈಗೆ ಸಿಗದೆ ತಲೆಮರೆಸಿಕೊಳ್ಳುತ್ತಿದ್ದ. ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಹಂಚಿಕೆ ಮಾಡುತ್ತಿದ್ದವರಲ್ಲಿ ಈತನೂ ಒಬ್ಬನಾಗಿದ್ದ.
ಈ ಹಿಂದೆ ಮಂಗಳೂರಿನ ಉರ್ವಾ ಠಾಣೆಯ ಎಎಸ್ಐಗೆ ಚೂರಿಯಿಂದ ಇರಿದು ಹಲ್ಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿಗೆ ಹಲ್ಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಸೈಬರ್ ಕ್ರೈಂ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣೆಯಲ್ಲಿ ಎರಡು ದರೋಡೆ ಪ್ರಕರಣ, ಮಂಗಳೂರಿನ ಕಂಕನಾಡಿ ನಗರ, ಕೊಣಾಜೆ ಠಾಣೆ ಸೇರಿದಂತೆ ಮೊಹಮ್ಮದ್ ನಿಯಾಜ್ ಹತ್ತು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಹಲವು ಕೋರ್ಟ್ ವಾರೆಂಟ್ ಗಳಿದ್ದರೂ, ಪೊಲೀಸರ ತಲೆತಪ್ಪಿಸಿಕೊಂಡು ಆಯಕಟ್ಟಿನ ಪೆಡ್ಲರ್ ಗಳಿಗೆ ಡ್ರಗ್ ಪೂರೈಸುತ್ತಿದ್ದ. ನಿಯಾಜ್ ಜೊತೆಗಿದ್ದ ಇನ್ನಿಬ್ಬರು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Three drug peddlers were arrested by Mangaluru city crime branch police. MDMA, pistol and many other items were seized from them.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm