ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
10-01-25 11:01 pm
Bangalore Correspondent
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
Ramnagara Accident, KSRTC: KSRTC ಬಸ್ - ಬೈಕ್ ನ...
09-01-25 07:04 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
10-01-25 11:14 pm
Mangalore Correspondent
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
Wenlock Hospital, Mangalore, organ harvesting...
10-01-25 03:31 pm
Mangalore crime, Misfire, Police; ಪಿಎಫ್ಐ ಒಳಸಂ...
09-01-25 07:50 pm
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm