ಬ್ರೇಕಿಂಗ್ ನ್ಯೂಸ್
25-07-23 04:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 25: ಇತ್ತೀಚೆಗೆ ಹೊಸಬೆಟ್ಟು ಬಳಿಯ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಳಿಗೆಯಿಂದ ಎರಡು ಕಾರುಗಳನ್ನು ಕಳವುಗೈದ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 12ರಂದು ರಾತ್ರಿ ಹೊಸಬೆಟ್ಟಿನ ಕಾರು ಮಾರ್ಟ್ ನಲ್ಲಿ ಕಳವು ಕೃತ್ಯ ನಡೆದಿತ್ತು. ಆರೋಪಿಗಳು ರೇನ್ ಕೋಟ್ ಧರಿಸಿ ಕಚೇರಿಯ ಒಳನುಗ್ಗಿದ್ದು ಬಳಿಕ ಡ್ರಾವರ್ ನಿಂದ ಕೀ ಪಡೆದು ಕ್ರೆಟಾ ಮತ್ತು ಸ್ವಿಫ್ಟ್ ಕಾರನ್ನು ಎಗರಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಕಾರು ಮಳಿಗೆಯ ಮಾಲಕ ಅಬೀದ್ ಅಹ್ಮದ್ ಸೂರಲ್ಪಾಡಿ, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಕಳವಾದ ಕಾರುಗಳ ಪತ್ತೆಗಾಗಿ ಪೊಲೀಸರು ಜುಲೈ 22ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಪ್ರಾಪ್ತ ಯುವಕನೊಬ್ಬ ಕಾರು ಚಲಾಯಿಸಿಕೊಂಡು ಬಂದು ಸಿಕ್ಕಿಬಿದ್ದಿದ್ದ. ತಪಾಸಣೆ ವೇಳೆ ಕಳವುಗೈದ ಕಾರು ಎಂದು ತಿಳಿದುಬಂದಿದ್ದು ಇನ್ನೊಬ್ಬ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆತ ನೀಡಿದ ಮಾಹಿತಿಯಂತೆ ಕಿನ್ನಿಪದವು ನಿವಾಸಿ ಮಹಮ್ಮದ್ ಶಫೀಕ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಕಡದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶಫೀಕ್ ನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಕಳವುಗೈದು ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ಇರಿಸಿದ್ದ ಕ್ರೆಟಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಉಪಯೋಗಿಸಿದ್ದ ಸುತ್ತಿಗೆ, ರೇನ್ ಕೋಟ್ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫೀಕ್ ಒಂದು ವರ್ಷದ ಹಿಂದೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಕೆಸರುಗದ್ದೆ ಎಂಬಲ್ಲಿ ಮನೆಯಿಂದ ದ್ವಿಚಕ್ರ ವಾಹನ ಕಳವುಗೈದಿದ್ದು ಅದನ್ನೂ ವಶಕ್ಕೆ ಪಡೆಯಲಾಗಿದೆ. ಒಟ್ಟು ವಶಕ್ಕೆ ಪಡೆದ ವಾಹನಗಳ ಮೌಲ್ಯ 15 ಲಕ್ಷ ಆಗಿರುತ್ತದೆ. ಆರೋಪಿ ಶಫೀಕ್ ನನ್ನು ಪೊಲೀಸರು ಕೋರ್ಟಿಗೆ ಹಾಜರು ಪಡಿಸಿ ಮೂರು ದಿನ ಕಸ್ಟಡಿಗೆ ಪಡೆದಿದ್ದಾರೆ. ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
Mangalore second hand car robbery, Police swift action two arrested including Minor by Surathkal Inspector Mahesh Prasad. The thieves were arrested for stealing two cars and other valuables from the used car showroom at Suratkal on July 12.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm