ಬ್ರೇಕಿಂಗ್ ನ್ಯೂಸ್
27-07-23 12:19 pm Mangalore Correspondent ಕ್ರೈಂ
ಮಂಗಳೂರು, ಜುಲೈ 27: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನ್ಯಾಯಾಧೀಶೆ ಮಂಜುಳಾ ಇಟ್ಟಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ವ್ಯಕ್ತಿ. 2014ರ ಆ.1ರಿಂದ 2016ರ ಸೆ.2ರ ನಡುವೆ ಪ್ರೌಢ ಶಾಲೆಯ ವಿದ್ಯಾರ್ಥಿಯನ್ನು ಹಲವು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೃಥ್ವಿರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿಯನ್ನು ಪೃಥ್ವಿರಾಜ್ ತನ್ನ ಮನೆಗೆ ಕರೆಸಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಇದನ್ನು ಯಾರಿಗಾದರೂ ಹೇಳಿದರೆ ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ, ಹಾಜರಾತಿ ಕಡಿತ ಮಾಡುತ್ತೇನೆ ಎಂದು ಬೆದರಿಸಿದ್ದ. ಬಾಲಕನ ಮರ್ಮಾಂಗದಲ್ಲಿ ಗಾಯವಾದ ಬಳಿಕ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ವೇಳೆ ಬಾಲಕ ತನ್ನ ಮೇಲಿನ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಅಂದಿನ ಸುರತ್ಕಲ್ ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದ ಚೆಲುವರಾಜ್ ಬಿ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ, ಆರೋಪ ದೃಢಪಟ್ಟಿರುವುದರಿಂದ ತಪ್ಪಿತಸ್ಥನೆಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಅಪರಾಧಿಗೆ ಪೋಕ್ಸೊ ಕಾಯ್ದೆ ಸೆಕ್ಷನ್ 6ರಡಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿಣ ಸಜೆ, ಪೋಕ್ಸೊ ಸೆಕ್ಷನ್ 10ರಂತೆ 5 ವರ್ಷ ಸಾದಾ ಸಜೆ, ಐದು ಸಾವಿರ ರೂ ದಂಡ ಮತ್ತು ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾದಾ ಸಜೆ, ಐಪಿಸಿ ಸೆಕ್ಷನ್ 377ರಡಿ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಮೂರು ತಿಂಗಳ ಕಠಿಣ ಸಜೆ, ಐಪಿಸಿ 506ರಡಿ 1 ವರ್ಷ ಸಾದಾ ಸಜೆ, ಒಂದು ಸಾವಿರ ರೂ.ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪಿತ್ತಿದ್ದಾರೆ.
ಸಂತ್ರಸ್ತ ಬಾಲಕನಿಗೆ ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.
Mangalore High school teacher gets life sentence for natural sex with student, sexual assault. Teacher Prithviraj had sexually assulted the student from 2014-2016.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm