ಬ್ರೇಕಿಂಗ್ ನ್ಯೂಸ್
28-07-23 10:46 pm HK News Desk ಕ್ರೈಂ
ನವದೆಹಲಿ, ಜುಲೈ 28: ಮದುವೆಗೆ ನಿರಾಕರಿಸಿದ ಒಂದೇ ಕಾರಣಕ್ಕೆ ಹಾಡಹಗಲೇ ಪಾರ್ಕ್ ನಲ್ಲಿ ಕುಳಿತಿದ್ದ 25 ವರ್ಷದ ವಿದ್ಯಾರ್ಥಿನಿ ತಲೆಗೆ ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ದಕ್ಷಿಣ ದೆಹಲಿಯ ಮಾಳವೀಯ ನಗರದ ಅರಬಿಂದೋ ಕಾಲೇಜು ಬಳಿಯ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು, ರಾಡ್‌ನಿಂದ ಹಲ್ಲೆ ನಡೆಸಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಮೃತ ವಿದ್ಯಾರ್ಥಿನಿ ಕಮಲಾ ನೆಹರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ತೆರಳಿದ್ದಳು. ಘಟನೆ ಸಂಬಂಧ 28 ವರ್ಷದ ಆರೋಪಿ ಇರ್ಫಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಳವೀಯಾ ನಗರದ ಅರಬಿಂದೋ ಕಾಲೇಜು ಬಳಿ 25 ವರ್ಷದ ಯುವತಿಯ ಶವ ಪತ್ತೆಯಾಗಿದೆ. ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ತಲೆಗೆ ಬಲವಾದ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಚಂದನ್ ಚೌಧರಿ ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಇರ್ಫಾನ್ ಮೃತ ಯುವತಿಯೊಂದಿಗೆ ಮದುವೆಯಾಗಲು ಬಯಸಿದ್ದ. ಆದರೆ, ಯುವತಿ ಮನೆಯವರು ಮದುವೆಗೆ ನಿರಾಕರಿಸಿದ್ದರು, ಇದೇ ಕಾರಣಕ್ಕೆ ಆಕ್ರೋಶಗೊಂಡಿದ್ದ ಇರ್ಫಾನ್ ಆಕೆಯ ಮೇಲೆ ರಾಡ್ ನಿಂದ ಹಲ್ಲೆ ಮಾಡಿ ಕೊಂದು ಹಾಕಿದ್ದಾನೆ. ಮೃತ ಯುವತಿಯ ಶವದ ಬಳಿ ರಾಡ್ ಕೂಡ ಪತ್ತೆಯಾಗಿದೆ.
ದಕ್ಷಿಣ ದೆಹಲಿಯ ಡಿಸಿಪಿ ಚಂದನ್ ಚೌಧರಿ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು "ಇಡೀ ಘಟನೆಯು ಮೂಲತಃ ಪ್ರೇಮ ಕೋನ ಮತ್ತು ಮದುವೆ ನಿರಾಕರಣೆಯ ಹಿನ್ನಲೆ ಹೊಂದಿದೆ. ಸಂತ್ರಸ್ತೆ (22 ವರ್ಷ) ಮತ್ತು ಆರೋಪಿ (28 ವರ್ಷ) ಸೋದರ ಸಂಬಂಧಿಗಳಾಗಿದ್ದು, ಮೃತ ಯುವತಿಯ ಕುಟುಂಬವು ಆರೋಪಿ ಇರ್ಫಾನ್ ನಿರುದ್ಯೋಗಿಯಾಗಿದ್ದರಿಂದ ಮದುವೆಗೆ ನಿರಾಕರಿಸಿತ್ತು. ತರುವಾಯ, ಹುಡುಗಿ ಅವನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದಳು. ಇದರಿಂದ ಹುಡುಗ ಮಾನಸಿಕವಾಗಿ ತೊಂದರೆಗೀಡಾಗಿದ್ದನು. ಆದ್ದರಿಂದ ಅವನು ಇಂದು ಈ ಅಪರಾಧವನ್ನು ಮಾಡಿದ್ದಾನೆ. ಅವನು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಮಾಳವೀಯಾ ನಗರದಂತಹ ಐಷಾರಾಮಿ ಪ್ರದೇಶದಲ್ಲಿ, ರಾಡ್‌ನಿಂದ ಹೊಡೆದು ಯುವತಿಯನ್ನು ಹತ್ಯೆ ಮಾಡಲಾಗಿದೆ. ದೆಹಲಿ ಅತ್ಯಂತ ಅಸುರಕ್ಷಿತವಾಗಿದೆ’ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಟ್ವೀಟ್ ಮಾಡಿದ್ದಾರೆ.
A man battered his cousin to death with an iron rod in Delhi allegedly because she had refused to marry him, and he was finding it difficult to get anyone else to agree either. The man, who killed the 25-year-old in a park this afternoon, had allegedly been planning the murder for three days and surrendered to the police hours after committing it.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm