ಬ್ರೇಕಿಂಗ್ ನ್ಯೂಸ್
30-07-23 04:56 pm HK News Desk ಕ್ರೈಂ
ಕೇರಳ, ಜು.30: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಬೀಭತ್ಸ ಘಟನೆ ಕೇರಳದ ಎರ್ನಾಕುಳಂ ಜಿಲ್ಲೆಯ ಆಲುವಾದಲ್ಲಿ ನಡೆದಿದೆ. ಅಸ್ಸಾಂ ನಿವಾಸಿ ಅಶ್ಪಾಕ್ ಆಲಂ ಬಂಧಿತ ಆರೋಪಿ.
ಬಾಡಿಗೆ ಕಟ್ಟಡದಲ್ಲಿ ವಾಸವಾಗಿರುವ ಹೊರ ರಾಜ್ಯದ ಕಾರ್ಮಿಕರೊಬ್ಬರ 5 ವರ್ಷ ವಯಸ್ಸಿನ ಪುತ್ರಿ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ 7ರ ವೇಳೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರು ಹಂಚಿಕೊಂಡ ಮಾಹಿತಿ ಗಮನಿಸಿದ ಆಲುವಾ ಮಾರುಕಟ್ಟೆಯ ಕಾರ್ಮಿಕರು ಶುಕ್ರವಾರ ಸಂಜೆ 3.30ರ ವೇಳೆ ಮಾರುಕಟ್ಟೆಯಲ್ಲಿ ಮಗುವಿನೊಂದಿಗೆ ವ್ಯಕ್ತಿಯೊಬ್ಬನನ್ನು ನೋಡಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿ ಅಶ್ಪಾಕ್ ಮಗುವನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.
ರಾತ್ರಿ 9.30ಕ್ಕೆ ತೊಟ್ಟಕ್ಕಾಟ್ ತೀರದಿಂದ ಆತನನ್ನು ಬಂಧಿಸಲಾದರೂ, ಮದ್ಯ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನಿಂದ ಯಾವುದೇ ಮಾಹಿತಿ ಸಂಗ್ರಹಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಪೊಲೀಸರು ರಾತ್ರಿ ರೈಲು ನಿಲ್ದಾಣ ಹಾಗೂ ಕಾರ್ಮಿಕ ಶಿಬಿರಗಳಲ್ಲಿ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ. ಶನಿವಾರ ಬೆಳಗ್ಗೆ ಬಾಲಕಿಯ ಮೃತ ದೇಹ ಆಲುವಾ ಮಾರುಕಟ್ಟೆಯ ತ್ಯಾಜ್ಯ ಎಸೆಯುವ ನಿರ್ಜನ ಪ್ರದೇಶದಲ್ಲಿ ಗೋಣಿ ಚೀಲದಲ್ಲಿ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗೋಣಿ ಚೀಲದಲ್ಲಿ ಮಗುವಿನ ಕೈ ಹೊರಗೆ ಕಾಣಿಸಿರುವುದು ಮೃತ ದೇಹ ಪತ್ತೆಗೆ ಸಾಧ್ಯವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಾಲಕಿಯ ತಂದೆಯನ್ನು ಸ್ಥಳಕ್ಕೆ ಕರೆ ತಂದು ಮೃತ ದೇಹ ತಮ್ಮ ಮಗಳದ್ದು ಎಂದು ಖಚಿತಪಡಿಸಿದ್ದಾರೆ.
ಶನಿವಾರ ಬೆಳಗ್ಗೆ ನಶೆ ಇಳಿದ ಅಶ್ಪಾಕ್, ಹಣಕ್ಕಾಗಿ ಮಗುವನ್ನು ಜಾಕೀರ್ ಎಂಬಾತನಿಗೆ ಒಪ್ಪಿಸಿರುವುದಾಗಿ ಹೇಳಿಕೆ ನೀಡಿ ಪೊಲೀಸರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದ. ಕೊನೆಗೂ ವಿಚಾರಣೆ ತೀವ್ರಗೊಳಿಸಿದಾಗ ತಾನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ವಿಧಿವಿಜ್ಞಾನ ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ಬಳಿಕ ಮೃತದೇಹವನ್ನು ಕಳಮಶ್ಶೇರಿ ವೈದ್ಯಕೀಯ ಕಾಲೇಜಿಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕತ್ತು ಹಿಸುಕಿ, ಬಾಲಕಿ ಧರಿಸಿದ್ದ ಬನಿಯನ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮಗುವಿನ ಖಾಸಗಿ ಭಾಗ ಸೇರಿದಂತೆ ದೇಹದ ಮೇಲೆ ಗಾಯಗಳು ಪತ್ತೆಯಾಗಿದೆ. ಫೋರೆನ್ಸಿಕ್ ವರದಿಯ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಆರೋಪ ಹೊರಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ಪಾಕ್ ಆಲಂ 2 ದಿನ ಹಿಂದೆ ವಾಸಕ್ಕೆ ಬಂದಿದ್ದ. ಶುಕ್ರವಾರ ಸಂಜೆ ಬಾಲಕಿಗೆ ಜ್ಯೂಸ್ ನೀಡಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಮೃತದೇಹವನ್ನು ಗೋಣಿಚೀಲದಲ್ಲಿ ಕಟ್ಟಿ ತ್ಯಾಜ್ಯ ರಾಶಿಯಲ್ಲಿ ಹಾಕಿ ಅದರ ಮೇಲೆ ದೊಡ್ಡ ಕಲ್ಲುಗಳನ್ನು ಇಟ್ಟು ಪರಾರಿಯಾಗಿದ್ದಾನೆ.
ಬಾಲಕಿಯ ಮೃತ ದೇಹ ಪತ್ತೆಯಾದ ಸುದ್ದಿ ಹಬ್ಬುತ್ತಿದ್ದಂತೆ ಮಾರುಕಟ್ಟೆ ಪ್ರದೇಶದಲ್ಲಿ ಜನ ಜಮಾಯಿಸಿದ್ದಾರೆ. ಇದೇ ವೇಳೆ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ದರೂ ಸ್ಥಳೀಯರ ಪ್ರತಿಭಟನೆಯಿಂದ ವಾಪಸ್ ಕರೆದೊಯ್ದಿದ್ದಾರೆ. ಬಾಲಕಿಯನ್ನು ತಾನೊಬ್ಬನೇ ಕೊಲೆ ಮಾಡಿರುವುದಾಗಿ ಅಶ್ಪಾಕ್ ಹೇಳಿಕೆ ನೀಡಿದ್ದರೂ ಪೊಲೀಸರು ಅದನ್ನು ನಂಬಿಲ್ಲ.
ಶುಕ್ರವಾರ ಸಂಜೆ ಅಶ್ಪಾಕ್ ಬಾಲಕಿಯೊಂದಿಗೆ ಮಾರುಕಟ್ಟೆಗೆ ಬಂದಿದ್ದಾನೆ. ಬಾಲಕಿಯ ಬಗ್ಗೆ ಆತನನ್ನು ಪ್ರಶ್ನಿಸಿದಾಗ ತನ್ನ ಮಗಳೆಂದು ಹೇಳಿಕೊಂಡಿದ್ದ ಎಂದು ಮಾರುಕಟ್ಟೆ ಕಾರ್ಮಿಕರು ಹೇಳಿದ್ದಾರೆ.
A five-year-old girl was brutally raped and strangled to death after she was abducted by a migrant worker from her house in Kerala's Kochi on Friday, news agency PTI reported citing the police.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm