ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್‌ಪಿಎಫ್ ಎಎಸ್‌ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್‌ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್‌ಪಿಎಫ್ ಪೇದೆಯು ಎಎಸ್‌ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್‌ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ಜೈಪುರ ಎಕ್ಸ್‌ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್‌ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್‌ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್‌ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್‌ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್‌ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm