ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm