ಅಡಿಕೆ ತೋಟಕ್ಕೇ ಪೋಲೀಸರ ದಾಳಿ ; ಗಾಂಜಾ ಬೆಳೆಸಿ ಬಿಸಿನೆಸ್, 80 ಸಾವಿರ ಮೌಲ್ಯದ 2 ಕೆಜಿ ಮಾಲು ಸಮೇತ ಇಬ್ಬರು ವಶಕ್ಕೆ 

10-08-23 03:36 pm       HK News Desk   ಕ್ರೈಂ

ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ತೀರ್ಥಹಳ್ಳಿ, ಆಗಸ್ಟ್ 10: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧ ಸುನಿಲ್‌ (34) ಮತ್ತು ಕಾರ್ತಿಕ್‌ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಇನ್ಸ್‌ಪೆಕ್ಟರ್‌ ಅಶ್ವಥ್‌ ಗೌಡ, ಸಬ್‌ ಇನ್ಸ್‌ಪೆಕ್ಟರ್‌ ಗಾದಿ ಲಿಂಗಪ್ಪ ಗೌಡರ್‌ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Thirthahalli Ganja crop in arecunt plantation, Police raid farm, two arrested.