ಬ್ರೇಕಿಂಗ್ ನ್ಯೂಸ್
10-08-23 06:27 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಬೀದಿ ನಾಟಕ ಮಾಡುತ್ತಿದ್ದ ಕಲಾವಿದನೊಬ್ಬ ತಾನು ವಾಮಂಜೂರು ಠಾಣೆಯ ಪೊಲೀಸ್ ಎಂದು ಹೇಳಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರಗೈದು, ಆಕೆಯ ನಗ್ನ ಫೋಟೋಗಳನ್ನು ತೆಗೆದು ವೈರಲ್ ಮಾಡಿದ್ದಲ್ಲದೆ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು, ಮಂಗಳೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ರಾಯಚೂರು ಜಿಲ್ಲೆಯ ಮೂಲದ ಯಮನೂರ(22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿ ನಾಟಕ ಮಾಡಲು ಪೊಲೀಸ್ ಡ್ರೆಸ್ ಮಾಡಿಕೊಂಡಿದ್ದು, ಅದನ್ನೇ ಧರಿಸಿ ತಾನು ಪೊಲೀಸ್ ಎಂದು ಪೋಸು ನೀಡುತ್ತಿದ್ದ. ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಗೆ ಇನ್ ಸ್ಟಾ ಗ್ರಾಮಿನಲ್ಲಿ ಪರಿಚಯ ಆಗಿದ್ದು, ಬಳಿಕ ವಾಮಂಜೂರಿನ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿದ್ದೇನೆಂದು ನಂಬಿಸಿದ್ದ. ಕಳೆದ ಮೇ ತಿಂಗಳಲ್ಲಿ ಯುವತಿಯನ್ನು ಕದ್ರಿ ದೇವಸ್ಥಾನದಲ್ಲಿ ಭೇಟಿಯಾಗಿದ್ದು, ಬಳಿಕ ತಣ್ಣೀರುಬಾವಿ ಬೀಚ್ ಗೆ ಕರೆದೊಯ್ದು ಅಲ್ಲಿ ಆಕೆಯೊಂದಿಗೆ ಫೋಟೋ ತೆಗೆದಿದ್ದ. ಬಳಿಕ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಬೆಂಗಳೂರಿಗೆ ಕರೆಯಿಸಿ, ಅಲ್ಲಿ ನೆಲಮಂಗಲದ ಲಾಡ್ಜ್ ನಲ್ಲಿರಿಸಿ ಬಲವಂತದ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಮೂಲ್ಕಿ, ಕಿನ್ನಿಗೋಳಿಯ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದು, ಈ ವೇಳೆ ಯುವತಿಯ ನಗ್ನ ಫೋಟೋ ತೆಗೆದು ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ.
ಫೋಟೋವನ್ನು ಡಿಲೀಟ್ ಮಾಡಬೇಕಾದರೆ ಒಂದೂವರೆ ಲಕ್ಷ ಹಣ ನೀಡಬೇಕೆಂದು ಬ್ಲಾಕ್ಮೇಲ್ ಮಾಡಿದ್ದಾನೆ. ಈ ಕುರಿತು ಯುವತಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಸೆಕ್ಷನ್ 376, 384, 506, 170 ಐಪಿಸಿ ಮತ್ತು ಐಟಿ ಆಕ್ಟ್ ಅಡಿ ಕೇಸು ದಾಖಲಾಗಿದೆ. ಆರೋಪಿಯನ್ನು ಆಗಸ್ಟ್ 9ರಂದು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತ್ತೀಚೆಗೆ ಮುಗ್ಧ ಹೆಣ್ಮಕ್ಕಳನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಮಾಡಿ ಫೋಟೋ ತೆಗೆದು ಬ್ಲಾಕ್ಮೇಲ್ ಮಾಡುವ ಕೃತ್ಯಗಳು ಹೆಚ್ಚುತ್ತಿದ್ದು, ಈ ಬಗ್ಗೆ ಯುವತಿಯರ ಪೋಷಕರು ಜಾಗೃತಿ ಇರಬೇಕೆಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
Fake Vamanjoor police constable arrested in Mangalore, Engineer student raped several times in context of Promising Job. Directed as be identified as Yemanooru from Raichur district. Through Instagram he texted the girl and stated that is a police constable at Vamanjoor police station and promised of giving a job through which is raped her several times
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 02:25 pm
Mangaluru Correspondent
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
Wenlock Hospital, Mangalore, organ harvesting...
10-01-25 03:31 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm