ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm