ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm