ಬ್ರೇಕಿಂಗ್ ನ್ಯೂಸ್
13-08-23 10:46 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 13: ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ಅನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮಂಗಳೂರು ಮೂಡುಶೆಡ್ಡೆಯ ನಿವಾಸಿ ಮೊಹಮ್ಮದ್ ಇಮ್ರಾನ್ ಎಂಬಾತ ಇನ್ನಿಬ್ಬರು ವ್ಯಕ್ತಿಗಳೊಂದಿಗೆ ಸೇರಿಕೊಂಡು ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ವಶದಲ್ಲಿರಿಸಿ KA-20-MB-0569 ನೇ ಬಿಳಿ ಬಣ್ಣದ ಮಾರುತಿ ರಿಡ್ಜ್ ಕಾರಿನಲ್ಲಿ ಬೊಂದೆಲ್, ಪಡುಶೆಡ್ಡೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್(36), ಉಡುಪಿ ಜಿಲ್ಲೆಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್(42), ಮಂಜನಾಡಿ ನಿವಾಸಿ ಅಬ್ದುಲ್ ಬಶೀರ್ ಅಬ್ಬಾಸ್(39) ಬಂಧಿತರು. ಇವರನ್ನು ವಶಕ್ಕೆ ಪಡೆದು ಒಟ್ಟು 170 ಗ್ರಾಂ ತೂಕದ ರೂ. 9,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎಂಡಿಎಂಎ ಫಿಲ್ಸ್-5, ಮಾರುತಿ ರಿಡ್ಜ್ ಕಾರು-1, 6 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 14,76,500/-ಆಗಬಹುದು. ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್ ಎಂಬಾತನ ವಿರುದ್ಧ ಈ ಹಿಂದೆ 2016 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಮಂಜೂರು ಚರಣ್ ಎಂಬಾತನ ಕೊಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2017 ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, 2019 ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2020 ರಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಮನೆಗೆ ನುಗ್ಗಿ ಸೊತ್ತು ಹಾನಿಗೊಳಿಸಿದ ಪ್ರಕರಣ, 2022 ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಯ 1 ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, ಉಡುಪಿ ಜಿಲ್ಲೆಯ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, 2023 ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ. ಇತ್ತೀಚೆಗೆ ಒಂದು ವಾರದ ಹಿಂದೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು.
ಇನ್ನೋರ್ವ ಆರೋಪಿ ಅಬ್ದುಲ್ ಬಶೀರ್ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ನರೇಂದ್ರ, ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
A major operation conducted by the CCB police resulted in the apprehension of three individuals, including a notorious drug peddler, for their involvement in the sale of MDMA (Methylene Dioxy Methamphetamine) across Mangaluru city.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 02:25 pm
Mangaluru Correspondent
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
Wenlock Hospital, Mangalore, organ harvesting...
10-01-25 03:31 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm