ಬ್ರೇಕಿಂಗ್ ನ್ಯೂಸ್
15-08-23 11:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 15: “ಡ್ರಗ್ಸ್ ಫ್ರೀ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ MDMA ಡ್ರಗ್ಸ್ ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ KA-19-MG-2744 ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ಮೊಹಮ್ಮದ್ ಹನೀಫ್ ಎ.ಎನ್(47), ಸೈಯದ್ ಫೌಜಾನ್(30), ಕುಂಜತ್ತೂರು ನಿವಾಸಿ ಸಿರಾಜುದ್ದೀನ್ ಅಬ್ಬೂಬಕ್ಕರ್(35) ಎಂಬುವರನ್ನು ಬಂಧಿಸಿದ್ದಾರೆ.

ಇವರಿಂದ ಒಟ್ಟು 100 ಗ್ರಾಂ ತೂಕದ ರೂ. 5,00,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000/- ಮಾರುತಿ ಸ್ವಿಫ್ಟ್ ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಒಟ್ಟು ಮೌಲ್ಯ ರೂ 10,94,500/-ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದು ಪ್ರಕರಣದಲ್ಲಿ ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ MDMA ಡ್ರಗ್ಸ್ ವಶದಲ್ಲಿರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಮಂಜೇಶ್ವರ ಮೀಯಪದವು ನಿವಾಸಿ ಇಬ್ರಾಹಿಂ ಅರ್ಷಾದ್ ವಿ.ಕೆ(30) ಎಂಬಾತನನ್ನು ಬಂಧಿಸಿದ್ದು ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಇಬ್ರಾಹಿಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.
CCB arrest four MDMA peddlers under Operation Drugs Free Mangalore. The arrests were carried out through two separate operations conducted at the Mangaluru North Police Station and Kankanady police station under the Commissionerate.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm