ಬ್ರೇಕಿಂಗ್ ನ್ಯೂಸ್
17-08-23 11:00 pm HK News Desk ಕ್ರೈಂ
ಕೊಚ್ಚಿ, ಆಗಸ್ಟ್ 17: ಬುರ್ಖಾ ಧರಿಸಿ ಲುಲು ಮಾಲ್‌ನ ಮಹಿಳಾ ಶೌಚಾಲಯ ಪ್ರವೇಶಿಸಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದ ಮೇಲೆ 23 ವರ್ಷದ ಐಟಿ ಉದ್ಯೋಗಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಬಿ.ಟೆಕ್ ಪದವೀಧರನಾಗಿರುವ ಆರೋಪಿ ವಿರುದ್ಧ ವಿವಿಧ ಸೆಕ್ಷನ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಲ್ಲಿನ ಇನ್ಫೋಪಾರ್ಕ್ ಮೂಲದ ಪ್ರಮುಖ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯ ಪ್ರವೇಶಿಸಿದ್ದಾನೆ. ಸಣ್ಣ ರಟ್ಟಿನ ಪೆಟ್ಟಿಗೆಯಲ್ಲಿ ಮೊಬೈಲ್ ಇರಿಸಿ, ದೃಶ್ಯಗಳನ್ನು ರೆಕಾರ್ಡ್ ಮಾಡಲು ಅದಕ್ಕೆ ರಂಧ್ರ ಮಾಡಿ ಬಾಗಿಲಿಗೆ ಅಂಟಿಸಿದ್ದ. ಬಳಿಕ ಹೊರ ಬಂದು ಶೌಚಾಲಯದ ಮುಖ್ಯ ಬಾಗಿಲಿನ ಮುಂದೆ ನಿಂತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಅನುಮಾನಾಸ್ಪದ ವರ್ತನೆ ಗಮನಿಸಿದ ಮಾಲ್‌ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ಆರೋಪಿಯನ್ನು ವಶಕ್ಕೆ ಪಡೆದು, ಬುರ್ಖಾ, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿ ಹಿಂದೆ ಈ ರೀತಿಯ ಕೃತ್ಯದಲ್ಲಿ ಭಾಗಿಯಾಗಿದ್ದರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
A 23-year-old IT professional has been arrested for allegedly entering a women's washroom wearing a burqa in a popular mall in Kerala and recording their videos on his mobile phone.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm