ಬ್ರೇಕಿಂಗ್ ನ್ಯೂಸ್
19-08-23 09:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 19: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಜೆಸಿಬಿ ಸೇರಿದಂತೆ ಹತ್ತು ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಸಂಜೆ 7.30ರ ಸುಮಾರಿಗೆ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ನದಿಯಿಂದಲೇ ನೇರವಾಗಿ ಮರಳನ್ನು ಎತ್ತಿ ಜೆಸಿಬಿ ಮತ್ತು ಡೋಜರ್ ಮೂಲಕ ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ. ಒಂದು ಜೆಸಿಬಿ, ಒಂದು ಡೋಜರ್, ಮರಳು ತುಂಬಿದ್ದ ಎರಡು ಟಿಪ್ಪರ್, ಎಂಟು ಖಾಲಿ ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಟಿಪ್ಪರ್, ಜೆಸಿಬಿ ಯಾರಿಗೆ ಸೇರಿದ್ದು, ಯಾರ ಒಡೆತನದಲ್ಲಿ ಮರಳುಗಾರಿಕೆ ನಡೆಸುತ್ತಿದ್ದರು ಎನ್ನುವ ಬಗ್ಗೆ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ 1.25 ಕೋಟಿ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮರಳು ಮತ್ತು ವಾಹನಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಅಲ್ಲದೆ, ಇಲ್ಲಿ ಯಾರು ಮರಳುಗಾರಿಕೆ ನಡೆಸುತ್ತಿದ್ದರು, ವಾಹನಗಳು ಯಾರಿಗೆ ಸೇರಿದ್ದು ಅನ್ನುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೇರವಾಗಿ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದಾರೆ. ಉಳಾಯಿಬೆಟ್ಟು ಪರಿಸರದಲ್ಲಿ ಹಿಂದಿನಿಂದಲೂ ಮರಳುಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಪೊಲೀಸರು ದಾಳಿ ನಡೆಸಿದ್ದಿಲ್ಲ.
Ulaibettu police raid on illegal mining, JCB trucks and machines seized in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm