ಬ್ರೇಕಿಂಗ್ ನ್ಯೂಸ್
19-08-23 11:10 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ಸಿಕ್ಕಿಂ ಮೂಲದ 30 ವರ್ಷದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿನೇಶ್ ಸುಬ್ಬ ಹಲ್ಲೆಗೊಳಗಾದ ವ್ಯಕ್ತಿ. ಪಶ್ಚಿಮ ಸಿಕ್ಕಿಂ ಮೂಲದವರಾಗಿದ್ದು ಇಲೆಕ್ಟ್ರಾನಿಕ್ಸ್ ಸಿಟಿ 1ನೇ ಹಂತದಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದಾರೆ. ನಗರದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಸಹೋದರ ಹಾಗೂ ಸ್ನೇಹತರೊಂದಿಗೆ ಪಾರ್ಟಿ ಮಾಡಿ ಬುಧವಾರ ಬೆಳಗಿನ ಜಾವ 3-4 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುತ್ತಿದ್ದರು.
ಇವರು ದೊಡ್ಡತೊಗೂರಿನ ಪಿಸಿಆರ್ ಗಾರ್ಡನ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ದುಷ್ಕರ್ಮಿಗಳ ಗುಂಪೊಂದು ದಿನೇಶ್ ಅವರನ್ನು ನೋಡಿ, ಚೈನೀಸ್, ಚೈನೀಸ್ ಎಂದು ಕರೆದು ಅಡ್ಡಗಟ್ಟಿದ್ದಾರೆ. ಈ ವೇಳೆ ನಾನು ಸಿಕ್ಕಿಂ ಮೂಲದವನು, ಭಾರತೀಯ ಎಂದು ದಿನೇಶ್ ಹೇಳಿದರೂ ಕೇಳದೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳೀಯ ಕಟ್ಟಡದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ದಿನೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಮುಖ ಹಾಗೂ ತಲೆಗೆ 9 ಹೊಲಿಗೆಗಳನ್ನು ಹಾಕಲಾಗಿದೆ.
ಮನೆಯಿಂದ 100 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಚೈನೀಸ್ ಎಂದು ಕರೆದು, ಸಹೋದರನ ಮೇಲೆ ದಾಳಿ ನಡೆಸಿದ್ದಾರೆ. ಇದೊಂದು ಜನಾಂಗೀಯ ದಾಳಿಯಾಗಿದೆ. ಬೆಡ್ ರೆಸ್ಟ್ ನಲ್ಲಿರುವಂತೆ ಸಹೋದರನಿಗೆ ವೈದ್ಯರು ಸಲಹೆ ನೀಡಿದ್ದಾರೆಂದು ನಗರದಲ್ಲಿ 2009ರಿಂದಲೂ ವಾಸವಿರುವ ದಿನೇಶ್ ಅವರ ಸಹೋದರ ದೀಪಕ್ ದೊರ್ಜಿ ಹೇಳಿದ್ದಾರೆ.
In what appears to be a racially motivated attack, a 30-year-old man from Sikkim was beaten up badly by three miscreants at Electronics City on Wednesday. The victim has been identified as K Dinesh Subba, a native of West Sikkim and a resident of Electronics City, Phase I. He works as a waiter at a hotel in Neeladri Nagar. He was discharged from a hospital with nine stitches on his head and face.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm