ಪಿಎಸ್ಐ ಎಂದು ಹೇಳಿ ವಂಚಿಸುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಸೆರೆ ; ವಂಚನೆಗೆ ಒಳಗಾದವರಿದ್ದರೆ ಮಾಹಿತಿ ನೀಡಲು ಮನವಿ

20-08-23 07:38 pm       Mangalore Correspondent   ಕ್ರೈಂ

ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಯುವಕನೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಉರ್ವಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

ಮಂಗಳೂರು, ಆಗಸ್ಟ್ 20: ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಯುವಕನೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಉರ್ವಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂಬಾತ ಬಂಧಿತ ವ್ಯಕ್ತಿ. ಆರೋಪಿ ಬಳಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಸೆಟ್ ಗಳನ್ನು ವಶಪಡಿಸಲಾಗಿದೆ. 

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಬೆನೆಡಿಕ್ಟ್ ಸಾಬು ಇಡುಕ್ಕಿ ಜಿಲ್ಲೆಯ ಅಂಬಚ್ಚಾಲ್, ಪಳ್ಳಿವಾಸಿಲ್ ನಿವಾಸಿಯೆಂದು ಪೊಲೀಸರು ಗುರುತಿಸಿದ್ದಾರೆ. ಕಾಲೇಜಿನಲ್ಲಿ ಜಾಗೃತಿ ಕಾರ್ಯಾಗಾರ ನಡೆಸುತ್ತಿದ್ದಾಗ ವಿದ್ಯಾರ್ಥಿಗಳು ನೀಡಿದ್ದ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ ವಂಚನೆಗೆ ಒಳಗಾದವರಿದ್ದರೆ, ಉರ್ವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ.

22 year old Nursing Student arrested for cheating people in the name of Police Constable in Mangalore. The arrested has been identifed as Benedict Babu Native of Kerala. The BengalurThe Mangaluru city police have requested that those who have been cheated by him can approach the police station.